ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕಡಲ ತೀರದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ದಡ ಸೇರಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಮೂವರು ಪ್ರವಾಸಿಗರನ್ನು ಬಚಾವ್‌ ಮಾಡಲಾಗಿದೆ. ಕರ್ತವ್ಯ ನಿರತ ಜೀವ ರಕ್ಷಕ ಸಿಬ್ಬಂದಿ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಸಮುದ್ರದ ಅಲೆಗಳಿಗೆ ಸಿಲುಕಿದ್ದ ಮೂವರು ಪ್ರವಾಸಿಗರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಹಾವೇರಿ ಜಿಲ್ಲೆಯ … Continued

ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

ಬೆಂಗಳೂರು: ವಿಧಾನಸೌಧದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂಬಂತೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನಕಲಿ ವಿಡಿಯೊ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಿಹಾರ ಮೂಲದ 25 ವರ್ಷದ ವಲಸೆ ಕಾರ್ಮಿಕನನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಅರಾರಿಯಾ ಜಿಲ್ಲೆಯ ಹಜರತ್‌ ಅಲಿ ಎಂಬಾತ ಬಂಧಿತ ಆರೋಪಿ. ಕಳೆದ ಕೆಲವು ತಿಂಗಳುಗಳಿಂದ … Continued

ಸಿಜೆಪಿಯ ಸೌರವ ದಾಸ್, ಅಶುತೋಷ ರಾಂಕಾ ಬಿಡುಗಡೆಗೆ ಆದೇಶ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ ಅಂಗವಾಗಿ ನಿಷೇಧಾಜ್ಞೆ ಉಲ್ಲಂಘಿಸಿ ಜಂತರ್ ಮಂತರ್‌ಗೆ ಪ್ರವೇಶಿಸಿದ ಆರೋಪದ ಮೇಲೆ ಅಕ್ಟೋಬರ್ 14ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಸಿಜೆಪಿ (CJP) ನಾಯಕರಾದ ಸೌರವ ದಾಸ್ ಮತ್ತು ಅಶುತೋಷ ರಾಂಕಾ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಬುಧವಾರ (ಅಕ್ಟೋಬರ್ 21) ಆದೇಶಿಸಿದ್ದಾರೆ. ಇಂದು, ಬುಧವಾರ … Continued

ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

ಶಿವಮೊಗ್ಗ: ನಗರದ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಭಾರೀ ಆತಂಕದ ಘಟನೆಯೊಂದು ಸಂಭವಿಸಿದೆ. ಇದೇ ಮೊದಲ ಬಾರಿಗೆ ತಾಯಿ ಶ್ರೀ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ಸಕ್ರೆಬೈಲು ಆನೆ ಬಿಡಾರದ ‘ಸೋಮಣ್ಣ’ ಎಂಬ ಆನೆ ಏಕಾಏಕಿ ದಿಕ್ಕಾಪಾಲಾಗಿ ಓಡಿದ್ದರಿಂದ ಆನೆಯ ಮೇಲಿದ್ದ ಮಾವುತ ಹಾಗೂ ಕಾವಾಡಿ ಕೆಳಗೆ ಬಿದ್ದಿದ್ದು, ಆನೆಯ ಬೆನ್ನ ಮೇಲಿದ್ದ ಬೆಳ್ಳಿ … Continued

ಬಿಜೆಪಿ ಯುವ ಮೋರ್ಚಾಕ್ಕೆ ನೂತನ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾಕ್ಕೆ (BJYM) ನೂತನ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಂಗಳವಾರ (ಅಕ್ಟೋಬರ್ 20) ಪ್ರಕಟಿಸಿರುವ ನೇಮಕಾತಿ ಪಟ್ಟಿಯಲ್ಲಿ ಏಳು ಮಂದಿಯನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಹಾಗೂ ಮೂವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರ ನಿರ್ದೇಶನದಂತೆ … Continued

ಸದ್ಯಕ್ಕೆ ವಿರಾಮ : ಪ್ರತಿಭಟನೆಗೆ ಬ್ರೇಕ್ ನೀಡುವಂತೆ ಸಿಜೆಪಿ ಬೆಂಬಲಿಗರಿಗೆ ದೀಪ್ಕೆ ಸಂದೇಶ ನೀಡಲು ಕಾರಣವೇನು ?

ನವದೆಹಲಿ: ಹಲವು ತಿಂಗಳುಗಳಿಂದ ಒಂದರ ಹಿಂದೆ ಮತ್ತೊಂದರಂತೆ ಪ್ರತಿಭಟನೆಗಳನ್ನು ನಡೆಸುತ್ತಾ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP), ಸದ್ಯಕ್ಕೆ ತನ್ನ ಹೋರಾಟಗಳಿಗೆ ವಿರಾಮ ನೀಡಲು ನಿರ್ಧರಿಸಿದೆಯೇ? ದೀಪಾವಳಿ ಹಬ್ಬದ ವರೆಗೆ ಕುಟುಂಬದ ಜೊತೆ ಸಮಯ ಕಳೆಯುವಂತೆ ಪಕ್ಷದ ಬೆಂಬಲಿಗರಿಗೆ ಅಭಿಜೀತ್ ದೀಪ್ಕೆ ನೀಡಿರುವ ಸಂದೇಶವು ಇಂತಹ ಸಾಧ್ಯತೆಯನ್ನು ಹೆಚ್ಚಿಸಿದೆ. ಪಕ್ಷದ ಪ್ರಮುಖ … Continued

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ರಾಷ್ಟ್ರ ರಾಜಧಾನಿ ದೆಹಲಿಗೂ ವಿಸ್ತರಿಸಿದ್ದು, ದೆಹಲಿ ಪೊಲೀಸರ ವಿಶೇಷ ಘಟಕವು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದೆ. ದಾಳಿಗೆ ಬಳಸಲಾದ ಶಸ್ತ್ರಾಸ್ತ್ರಗಳ ಖರೀದಿ, ಸಾಗಣೆ ಹಾಗೂ ಅವುಗಳನ್ನು ದಾಳಿಕೋರರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪದ ಮೇಲೆ … Continued