ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕಡಲ ತೀರದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ದಡ ಸೇರಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಮೂವರು ಪ್ರವಾಸಿಗರನ್ನು ಬಚಾವ್‌ ಮಾಡಲಾಗಿದೆ.
ಕರ್ತವ್ಯ ನಿರತ ಜೀವ ರಕ್ಷಕ ಸಿಬ್ಬಂದಿ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಸಮುದ್ರದ ಅಲೆಗಳಿಗೆ ಸಿಲುಕಿದ್ದ ಮೂವರು ಪ್ರವಾಸಿಗರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಹಮದ್ ಅಪ್ಸನ್ ಅಲಿ (21), ಆಶ್ರಫ್ ಮೆಹಬೂಬ ಅಲಿ (22) ಹಾಗೂ ಚಿಕ್ಕಬಳ್ಳಾಪುರ ಮೂಲದ ಶ್ರೀನಿವಾಸ ವೆಂಕಟಸ್ವಾಮಿ (35) ಅವರು ಸಮುದ್ರಕ್ಕೆ ಇಳಿದು ಈಜಾಟ ನಡೆಸುತ್ತಿದ್ದಾಗ ಸಮುದ್ರದ ಅಲೆಗೆ ಸಿಲುಕಿದ್ದರು ಎಂದು ಹೇಳಲಾಗಿದೆ.
ಬುಧವಾರ ಸಂಜೆ ಸುಮಾರು 4:30ರ ವೇಳೆಗೆ ಆರು ಮಂದಿ ಮುಖ್ಯ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದು ಈಜಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಅವರಲ್ಲಿ ಮೂವರು ಸಮುದ್ರದ ಅಲೆಗಳ ಸುಳಿಗೆ ಸಿಲುಕಿ ದಡಕ್ಕೆ ಮರಳಲಾಗದೆ ಒದ್ದಾಡಿದರು. ಅಪಾಯವನ್ನು ಗಮನಿಸಿದ ಕರ್ತವ್ಯ ನಿರತ ಜೀವ ರಕ್ಷಕ ಸಿಬ್ಬಂದಿ ಮತ್ತು ಮೇನ್ ಬೀಚ್‌ನ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಜಂಟಿ ಕಾರ್ಯಾಚರಣೆಯ ಮೂಲಕ ಮೂವರನ್ನೂ ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿಯಾದರು.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement