ಕಾರವಾರ : ರಸ್ತೆ ಅಪಘಾತದಲ್ಲಿ ಖ್ಯಾತ ವೈದ್ಯ ಸಾವು

ಕಾರವಾರ: ರಸ್ತೆಯಲ್ಲಿ ಒಮ್ಮೆಲೇ   ಅಡ್ಡಬಂದ ಬಂದ ಹಸುವಿನಿಂದ ಸಂಭವಿಸಿದ ಅಪಘಾತದಲ್ಲಿ ಕಾರವಾರದ ವೈದ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಮಾಜಾಳಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಕಾರವಾರದ ಪ್ರಮುಖ ಚರ್ಮರೋಗ ತಜ್ಞ ಡಾ. ಸುಭಾಷ ತಾಂಡೇಲ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಡಾ. ತಾಂಡೇಲ ಅವರು ಪ್ರಯಾಣಿಸುತ್ತಿದ್ದ ವಾಹನದ ಮುಂದೆ ಹಸುವೊಂದು ದಿಢೀರನೆ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅವರ ಅಕಾಲಿಕ ನಿಧನದಿಂದ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಪರಿಚಿತ ವಲಯದಲ್ಲಿ ತೀವ್ರ ದುಃಖ ಆವರಿಸಿದೆ.
ಡಾ. ಸುಭಾಷ ತಾಂಡೇಲ ಅವರು ಇತ್ತೀಚೆಗಷ್ಟೇ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ಈ ಹಿಂದೆ ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ, ಕಾರವಾರ ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್‌ಸಿ) ಸೇವೆ ಸಲ್ಲಿಸಿದ್ದರು. ಬಳಿಕ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕ್ರಿಮ್ಸ್‌) ಕಾರ್ಯನಿರ್ವಹಿಸಿದ್ದರು. ಅವರುಕಾರವಾರದ ಪ್ರಮುಖ ಚರ್ಮರೋಗ ತಜ್ಞರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement