ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನವಜಾತ ಶಿಶುವೊಂದು ಮೃತಪಟ್ಟ ಘಟನೆ ಉದ್ವಿಗ್ನತೆಗೆ ಕಾರಣವಾಗಿದ್ದು, ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪಾಲಕರು ಹಾಗೂ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈದ್ಯರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಭಟ್ಕಳ ತಾಲೂಕಿನ ಶಿರಾಲಿಯ ಸತೀಶ ರಾಮಾ ನಾಯ್ಕ ಮತ್ತು ಹೇಮಾ ನಾಯ್ಕ ದಂಪತಿಯ ಮಗು ಅಕ್ಟೋಬರ್ 27ರಂದು ಶಿರಾಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನಿಸಿತ್ತು. ಬುಧವಾರ ಮುಂಜಾನೆ ತಾಯಿ ಮಗುವಿಗೆ ಹಾಲುಣಿಸುತ್ತಿದ್ದ ವೇಳೆ ಮಗು ನೀಲಿ ಬಣ್ಣಕ್ಕೆ ತಿರುಗಿದೆ ಎನ್ನಲಾಗಿದೆ. ತಕ್ಷಣ ಶಿಶುವೈದ್ಯರು ಮಗುವಿಗೆ ಚಿಕಿತ್ಸೆ ನೀಡಿದರೂ, ಅದು ಚಿಕಿತ್ಸೆಗೆ ಸ್ಪಂದಿಸದೆ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ನವಜಾತ ಶಿಶುವಿನ ಸಾವಿನಿಂದ ಕೋಪಗೊಂಡ ಪಾಲಕರು ಹಾಗೂ ಸಂಬಂಧಿಕರು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಆಸ್ಪತ್ರೆಯಲ್ಲಿದ್ದ ಶಿಶುವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿಶುವೈದ್ಯರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಮೃತ ಮಗುವಿನ ಸಂಬಂಧಿಕರೂ ಪೊಲೀಸರಿಗೆ ದೂರು ನೀಡಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನವಜಾತ ಶಿಶುವೊಂದು ಮೃತಪಟ್ಟ ಘಟನೆ ಉದ್ವಿಗ್ನತೆಗೆ ಕಾರಣವಾಗಿದ್ದು, ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪಾಲಕರು ಹಾಗೂ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ದೂರು ಮತ್ತು ಪ್ರತಿದೂರು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಭಟ್ಕಳ ತಾಲೂಕಿನ ಶಿರಾಲಿಯ ಸತೀಶ ರಾಮಾ ನಾಯ್ಕ ಹಾಗೂ ಹೇಮಾ ನಾಯ್ಕ ದಂಪತಿಯ ಎರಡನೇ ಮಗು ಅಕ್ಟೋಬರ್ 27ರಂದು ಶಿರಾಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನಿಸಿತ್ತು. ಬುಧವಾರ ಮುಂಜಾನೆ ತಾಯಿ ಮಗುವಿಗೆ ಹಾಲುಣಿಸುತ್ತಿದ್ದ ವೇಳೆ ಮಗು ನೀಲಿ ಬಣ್ಣಕ್ಕೆ ತಿರುಗಿದೆ ಎನ್ನಲಾಗಿದೆ. ತಕ್ಷಣ ಶಿಶುವೈದ್ಯರು ಮಗುವಿಗೆ ಚಿಕಿತ್ಸೆ ನೀಡಿದರೂ ಅದು ಸ್ಪಂದಿಸದೆ ಕೆಲವೇ ಕ್ಷಣಗಳಲ್ಲಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ನವಜಾತ ಶಿಶುವಿನ ಸಾವಿನಿಂದ ಆಕ್ರೋಶಗೊಂಡ ಪಾಲಕರು ಹಾಗೂ ಸಂಬಂಧಿಕರು ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯಲ್ಲಿದ್ದ ಶಿಶುವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಶಿಶುವೈದ್ಯರು ಈ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿರುವ ಮೃತ ಮಗುವಿನ ಸಂಬಂಧಿಕರೂ ಪೊಲೀಸರಿಗೆ ದೂರು ನೀಡಿದ್ದಾರೆ. ವೈದ್ಯರ ಮೇಲಿನ ಹಲ್ಲೆಯನ್ನು ಕರ್ನಾಟಕ ಸರ್ಕಾರಿ ವೈದ್ಯರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಖಂಡಿಸಿವೆ. ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ