ಬೆಂಗಳೂರು : 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಮಾಡಲಾಗಿದೆ. ಆರಂಭದಲ್ಲಿ ಸಮಾಜಸೇವೆ ಕ್ಷೇತ್ರದಲ್ಲಿ ಡಾ. ಜಿ.ಎಸ್. ಚಂದ್ರಶೇಖರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಉತ್ತರ ಕನ್ನಡ
ಜಿಲ್ಲೆಯವರಲ್ಲ ಎಂದು ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ‘ಸಂಕೀರ್ಣ’ ವಿಭಾಗದಡಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಕೊನೇ ಕ್ಷಣದಲ್ಲಿ ಉತ್ತರ ಕನ್ನಡದವರನ್ನೇ ಆಯ್ಕೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಲಾಗಿದೆ.
ಅವರ ಬದಲಿಗೆ ಸಂಕೀರ್ಣ ವಿಭಾಗದಲ್ಲಿ ಹಿರಿಯ ಪತ್ರಕರ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನವರಾದ ಗಜಾನನ ಉಮಾಮಹೇಶ್ವರ ಭಟ್ (ಜಿ.ಯು. ಭಟ್) ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯೋತ್ಸವ ಪ್ರಶಸ್ತಿಗಳ ಮೂಲ ಆಯ್ಕೆ ಪಟ್ಟಿ ಪ್ರಕಟವಾದಾಗ ಉತ್ತರ ಕನ್ನಡ ಜಿಲ್ಲೆಯಿಂದ ಪ್ರಶಸ್ತಿಗಾಗಿ ಡಾ. ಜಿ.ಎಸ್. ಚಂದ್ರಶೇಖರ ಅವರ ಹೆಸರನ್ನು ಪ್ರಕಟಿಸಲಾಗಿತ್ತು. ಆದರೆ, ಅವರು ಉತ್ತರ ಕನ್ನಡ ಜಿಲ್ಲೆಯವರಲ್ಲ ಎಂಬ ವಿಚಾರ ಬೆಳಕಿಗೆ ಬಂದ ಬಳಿಕ ಆಯ್ಕೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಆಯ್ಕೆ ಪಟ್ಟಿಯಲ್ಲಿ ತಿದ್ದುಪಡಿ ಮಾಡಿರುವ ಸರ್ಕಾರ, ಡಾ. ಜಿ.ಎಸ್. ಚಂದ್ರಶೇಖರ ಅವರ ಹೆಸರನ್ನು ಕೈಬಿಟ್ಟು ಉತ್ತರ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತರಾದ ಜಿ.ಯು ಭಟ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಜಿ.ಯು. ಭಟ್ ಅವರು ಪತ್ರಿಕೋದ್ಯಮ, ರಂಗಭೂಮಿ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೊಡುಗೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ