ವಿಡಿಯೋ | ಕಾರವಾರ : ಶಾಲಾ ಆವರಣದಲ್ಲಿ ಬೃಹತ್ ಹೆಬ್ಬಾವು ಸೆರೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನಂದನಗದ್ದಾ ಭಾಗದಲ್ಲಿರುವ ತೇಲಂಗ ರಸ್ತೆಯ ಕನ್ನಡ ಶಾಲೆಯ ಆವರಣದಲ್ಲಿ ಬೃಹತ್‌ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಶಾಲೆಯ ಆವರಣದಲ್ಲಿ ಹೆಬ್ಬಾವು ಇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಶಾಲೆಯ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು.

ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.
ಅರಣ್ಯ ಇಲಾಖೆಯ ಸಿಬ್ಬಂದಿ ನಂತರ ಅದನ್ನು ಜನವಸತಿ ಪ್ರದೇಶದಿಂದ ದೂರಕ್ಕೆ ಒಯ್ದು ಕಾಡಿಗೆ ಬಿಟ್ಟಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೋ | ಅಂಕೋಲಾ : ಹಾರವಾಡ ಕಡಲ ತೀರಕ್ಕೆ ಬಂದು ಬಿದ್ದ ರಾಶಿರಾಶಿ ತಾರ್ಲೆ ಮೀನುಗಳು ; ಮುಗಿಬಿದ್ದ ಜನರು

ನಿಮ್ಮ ಕಾಮೆಂಟ್ ಬರೆಯಿರಿ

advertisement