ಶಿರಸಿ : ನದಿ ಜೋಡಣೆ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ, ಪ್ರಧಾನಿ ಮೋದಿ, ಸಿಎಂ ಡಿಕೆಶಿಗೆ ಪತ್ರ ರವಾನೆ

ಶಿರಸಿ: ನದಿಗಳ ಸ್ವಾಭಾವಿಕ ಹರಿವಿಗೆ ಧಕ್ಕೆ ಉಂಟಾಗದಿರಲಿ, ಪಶ್ಚಿಮ ಘಟ್ಟದ ಹಸಿರು ಪರಿಸರ ಉಳಿಯಲಿ ಎಂಬ ಕಳಕಳಿಯೊಂದಿಗೆ ಶಾಲಾ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಹೋರಾಟಕ್ಕೆ ಧ್ವನಿಗೂಡಿಸಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರಂಬೆಯ ಶಾರದಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪತ್ರ ಚಳವಳಿ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
ಪರಿಸರ ಹಾಗೂ ಜನಜೀವನಕ್ಕೆ ಮಾರಕವಾಗುವ ಈ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳುಕೇಂದ್ರ ಹಾಗೂ ರಾಜ್ಯ ಸರ್ಕಾರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.
ಪ್ರಧಾನಿ, ಸಿಎಂಗೆ ಪತ್ರ
ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಪತ್ರ ಬರೆದಿರುವ ಭೈರುಂಬೆಯ ಶಾರದಾಂಬಾ ಪ್ರೌಢಶಾಲೆಯ  ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಪತ್ರಗಳನ್ನು  ಅಂಚೆ ಮೂಲಕ ಪತ್ರವನ್ನು ರವಾನಿಸಿದ್ದಾರೆ.

ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ವೈಯಕ್ತಿಕವಾಗಿ ಪತ್ರಗಳನ್ನು ಬರೆದಿರುವ ವಿದ್ಯಾರ್ಥಿಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಕಳಿಸಿದ್ದಾರೆ. ನದಿ ಜೋಡಣೆ ಯೋಜನೆಯಿಂದ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಯೋಜನೆಯನ್ನು ಕೈಬಿಟ್ಟು ಪಶ್ಚಿಮ ಘಟ್ಟ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಯೋಜನೆಯಿಂದ ನದಿಗಳ ಸ್ವಾಭಾವಿಕ ಹರಿವು ಮತ್ತು ಪರಿಸರ ಸಮತೋಲನಕ್ಕೆ ಧಕ್ಕೆಯಾಗುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕಾರವಾರ: ಮೀನುಗಾರಿಕಾ ಬೋಟ್‌ನಲ್ಲಿ ಉಸಿರುಗಟ್ಟಿ ಇಬ್ಬರು ಮೀನುಗಾರರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement