ರಾಹುಲ್‌ ಗಾಂಧಿಗೆ ಭೇಟಿಯಾಗಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ

ನವದೆಹಲಿ: ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಸೋಮವಾರ (ಅಕ್ಟೋಬರ್‌ 12) ತಮ್ಮನ್ನು ಭೇಟಿಯಾಗಲು ಮಾಡಿದ ಮನವಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ನಿರಾಕರಿಸಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ʼಬಾರ್‌ ಆ್ಯಂಡ್‌ ಬೆಂಚ್‌ʼ ವದಿ ಮಾಡಿದೆ. ವರದಿಯ ಪ್ರಕಾರ, ಕಾಂಗ್ರೆಸ್‌ ನಾಯಕರು ಪ್ರಸ್ತಾಪಿಸಲು ಉದ್ದೇಶಿಸಿದ್ದ ವಿಷಯಗಳು ಈಗಾಗಲೇ … Continued

ವಿಡಿಯೋ |ಉತ್ತರ ಪ್ರದೇಶ ಕಾಂಗ್ರೆಸ್‌ ಕಚೇರಿಯಲ್ಲಿ ಹೈಡ್ರಾಮಾ : ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲೇ ಶೂ ಎಸೆತ, ಘರ್ಷಣೆ

ಲಕ್ನೋ : ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾದ ಆರಾಧನಾ ಮಿಶ್ರಾ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್ ಅವರ ಪದಗ್ರಹಣ ಸಮಾರಂಭದ ವೇಳೆ ಪಕ್ಷದ ರಾಜ್ಯ ಕಚೇರಿಯಲ್ಲೇ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಶೂಗಳನ್ನು ಎಸೆದಾಡಿದ ಘಟನೆ ನಡೆದಿದೆ. ನಿರ್ಗಮಿತ ರಾಜ್ಯಾಧ್ಯಕ್ಷ ಅಜಯ ರೈ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಮುಖಂಡೆ, ಪರಿಷತ್ ಸದಸ್ಯೆ … Continued

ನಟ ನಾನಾ ಪಾಟೇಕರ್ ಸಾವಿಗೆ ಕಾರಣ ಏನು ? ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ

ಪಣಜಿ: ಗೋವಾದ ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದ ಹಿರಿಯ ನಟ ನಾನಾ ಪಾಟೇಕರ್ ಅವರ ಸಾವಿಗೆ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದುಬಂದಿದೆ. 75 ವರ್ಷದ ನಾನಾ ಪಾಟೇಕರ್ ಅವರು ಅಕ್ಟೋಬರ್ 8ರಂದು ನಿಧನರಾಗಿದ್ದರು. ಅಂದು ನಸುಕಿನ ಜಾವ ಅವರ ಆರೋಗ್ಯದಲ್ಲಿ ಏರುಪೇರಾಗಿ ಪ್ರಜ್ಞಾಹೀನರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು … Continued

ಅಜ್ಜಿಯ ಸಾವಿನ ಸುದ್ದಿ ತಿಳಿಸಿದ್ರೂ ಅಂತ್ಯಕ್ರಿಯೆಗೆ ತೆರಳಲು ಒಪ್ಪದ ದೀಪ್ಕೆ : ದೆಹಲಿ ಪೊಲೀಸರು ; ಸಿಜೆಪಿ ಆರೋಪಕ್ಕೆ ವಿಡಿಯೊ ಬಿಡುಗಡೆ

ನವದೆಹಲಿ: ಕಸ್ಟಡಿಯಲ್ಲಿದ್ದಾಗ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ ದೀಪ್ಕೆ ಅವರಿಗೆ ಅವರ ಅಜ್ಜಿ ಸಾವಿನ ಸುದ್ದಿಯನ್ನು ತಿಳಿಸಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತೆರಳಲು ನೆರವು ನೀಡುವುದಾಗಿ ತಿಳಿಸಿದ್ದೆವು ಎಂದು ದೆಹಲಿ ಪೊಲೀಸರು ಭಾನುವಾರ ಹೇಳಿದ್ದಾರೆ. ಈ ಕುರಿತು ಪೊಲೀಸರು ಅಧಿಕಾರಿಗಳು ದೀಪ್ಕೆ ಅವರಿಗೆ ಮಾಹಿತಿ ನೀಡುತ್ತಿರುವ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಅಕ್ಟೋಬರ್ … Continued

ಆಧುನಿಕತೆಯ ಪ್ರಭಾವದಲ್ಲಿ ಭಾರತೀಯ ಪರಂಪರೆ-ಸಂಸ್ಕೃತಿ ಮರೆಯಾಗುತ್ತಿರುವುದು ಕಳವಳಕಾರಿ: ಗಂಗಾಧರ ಕೊಳಗಿ

ಶಿರಸಿ: ಆಧುನಿಕ ಜೀವನಶೈಲಿಯ ಪ್ರಭಾವದಿಂದ ಭಾರತೀಯತೆಯ ಮೂಲ ಪರಂಪರೆ ಹಾಗೂ ಸಾಂಸ್ಕೃತಿಕ ಮೌಲ್ಯಗಳು ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಾಹಿತಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾಧ್ಯಕ್ಷ ಗಂಗಾಧರ ಕೊಳಗಿ ಆತಂಕ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಯಡಹಳ್ಳಿಯಲ್ಲಿ ಭಾನುವಾರ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ … Continued

ಹುಕ್ಕೇರಿ | ದುರ್ಗಾಮಾತಾ ಮೂರ್ತಿ ಕೊಂಡೊಯ್ಯುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ; ಮೂವರು ಸಾವು, ಹಲವರಿಗೆ ಗಾಯ

ಬೆಳಗಾವಿ: ದುರ್ಗಾಮಾತಾ ದೌಡ್ ದೇವಿಯ ಮೂರ್ತಿಯನ್ನು ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ಆಗಮಿಸಿದ್ದ … Continued

ʼಒಂದು ವರ್ಷ ಶಾಂತಿ ಕದಡುವಂತಿಲ್ಲ’ : ಸಿಜೆಪಿಯ ಅಭಿಜೀತ ದೀಪ್ಕೆ, ಸೌರವ ದಾಸ್, ಅಶುತೋಷ ರಂಕಾಗೆ ಷರತ್ತುಬದ್ಧ ಬಿಡುಗಡೆ

ನವದೆಹಲಿ : ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಸುಮಾರು 24 ಗಂಟೆಗಳ ಬಳಿಕ ಭಾನುವಾರ ಬಿಡುಗಡೆ ಮಾಡಿದ್ದಾರೆ. ಅವರೊಂದಿಗೆ ಸಿಜೆಪಿಯ ಸಹ ಸಂಚಾಲಕ ಸೌರವ ದಾಸ್‌ … Continued

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರಪೂಜೆ ಹಾಗೂ ಸಾಂಪ್ರದಾಯಿಕವಾಗಿ ಪುಷ್ಪಾರ್ಚನೆ ಮಾಡುವ ಮೂಲಕ ಈ ಬಾರಿಯ 11 ದಿನಗಳ ನಾಡಹಬ್ಬ ದಸರಾಗೆ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಚಾಲನೆ ನೀಡಿದರು. ಭಾನುವಾರ ಬೆಳಿಗ್ಗೆ 11:50 ರಿಂದ 12:13 ರವರೆಗಿನ ಶುಭ ಧನುರ್ ಲಗ್ನದಲ್ಲಿ ಉದ್ಘಾಟನೆ ಮಾಡಲಾಯಿತು. ಚಾಮುಂಡಿ ಬೆಟ್ಟದಲ್ಲಿ … Continued

ಸಿಜೆಪಿ ಪ್ರತಿಭಟನೆ : ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್ನೆಟ್‌ ಸ್ಥಗಿತ ಬೇಡ, ಮೆಟ್ರೋ ಸಂಚಾರ ಎಂದಿನಂತಿರಲಿ ; ಸುಪ್ರೀಂ ಕೋರ್ಟ್‌

ನವದೆಹಲಿ : ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಳವಡಿಸಲಾಗಿರುವ ಎಲ್ಲ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಭಾನುವಾರ ನಿರ್ದೇಶನ ನೀಡಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅನಿವಾರ್ಯವಾಗಿರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಲ್ಲ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಬೇಕು. ದೆಹಲಿಯಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಇಂಟರ್ನೆಟ್‌ ಸೇವೆಗಳಿಗೆ … Continued

3000ಕ್ಕೂ ಹೆಚ್ಚು ಮಂದಿ ಬಿಡುಗಡೆ; ಸಿಜೆಪಿ ನಾಯಕ ಅಭಿಜೀರ ದೀಪ್ಕೆ ಸೇರಿ ಪ್ರಮುಖರು ಇನ್ನೂ ಪೊಲೀಸ್ ವಶದಲ್ಲಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶಕುಮಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ಗೆ ಮೆರವಣಿಗೆ ನಡೆಸಲು ಯತ್ನಿಸಿದ ಸಂದರ್ಭದಲ್ಲಿ ದೆಹಲಿಯ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ ಬಹುತೇಕ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆದರೆ, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮತ್ತು ಸಹ ಸಂಚಾಲಕ ಸೌರವ … Continued