ಗೆದ್ದಾಗ ಪ್ರಾಮಾಣಿಕ, ಸೋತಾಗ ಮತಗಳ್ಳತನವೇ? ಚುನಾವಣಾ ಆಯೋಗದ ಪರ 124 ಮಾಜಿ ಐಎಎಸ್‌-ಐಪಿಎಸ್‌ ಅಧಿಕಾರಿಗಳ ಬಹಿರಂಗ ಪತ್ರ

ನವದೆಹಲಿ: ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ 124 ಮಂದಿ ಮಾಜಿ ಐಎಎಸ್ (IAS), ಐಎಫ್‌ಎಸ್ (IFS) ಹಾಗೂ ಸಂಬಂಧಿತ ಸೇವೆಗಳ ಅಧಿಕಾರಿಗಳು, ವಿಶ್ವಾಸಾರ್ಹ ಪುರಾವೆಗಳಿಲ್ಲದೆ ಮತಗಳ್ಳತನದ ಆರೋಪ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಶನಿವಾರ ಭಾರತದ ನಾಗರಿಕರನ್ನು ಉದ್ದೇಶಿಸಿ ಬಹಿರಂಗ ಪತ್ರ ಬರೆದಿರುವ ಅವರು, … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಜನಾಕ್ರೋಶ ಸಭೆ ; 11 ನಿರ್ಣಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜೀವ ನದಿಗಳಾದ ಬೇಡ್ತಿ-ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆದ ಜನಾಕ್ರೋಶದ ಸಭೆಯಲ್ಲಿ ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಾವಿರಾರು ಮಂದಿ ಭಾಗವಹಿಸಿದ್ದರು. ಸರ್ಕಾರದಿಂದ ನಡೆಯುತ್ತಿರುವ ಡಿಪಿಎಆರ್‌ ರದ್ದುಪಡಿಸಿ, ಉತ್ತರ ಕನ್ನಡದ ನದಿಗಳು … Continued

‘ನಾಚಿಕೆಯಾಗಬೇಕು ನಿಮಗೆ’ : ಸಿಜೆಪಿ ನಾಯಕರ ವಶಕ್ಕೂ ಮುನ್ನ ಸೌರವ ದಾಸ್‌-ಮಹಿಳಾ ಪ್ರಯಾಣಿಕಳ ನಡುವೆ ವಾಗ್ವಾದ ; ವಿಡಿಯೊ ವೈರಲ್

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರನ್ನು ಶನಿವಾರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಪೊಲೀಸರು ವಶಕ್ಕೆ ಪಡೆದ ಘಟನೆಗೆ ಸಂಬಂಧಿಸಿದಂತೆ, ವಿಮಾನದೊಳಗೆ ಸಿಜೆಪಿ ಸಹ ಸಂಚಾಲಕ ಸೌರವ ದಾಸ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ, … Continued

ಸಿಜೆಪಿ ಪ್ರತಿಭಟನೆಗೂ ಮುನ್ನ ವಿಮಾನದಲ್ಲೇ ಅಭಿಜೀತ ದೀಪ್ಕೆ, ಸೌರವ ದಾಸ್, ಆಶುತೋಷ ರಾಂಕಾ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಶನಿವಾರ ದೆಹಲಿಯಲ್ಲಿ ವಿಮಾನದಿಂದ ಇಳಿಯುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿ ಸಂಘಟನೆಯ ಪ್ರತಿಭಟನೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ದೀಪ್ಕೆ ಅವರ … Continued

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ : ಕಾರವಾರದ ನಾವಿಕನಿಗೆ ಗಾಯ ; ವರದಿ

ನವದೆಹಲಿ: ಒಮಾನ್ ಕರಾವಳಿಯ ಸಮೀಪ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಪನಾಮ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ಮಾದರಿಯ ವಸ್ತುವೊಂದು ಅಪ್ಪಳಿಸಿದ ಪರಿಣಾಮ 11 ಭಾರತೀಯರು ಸೇರಿದಂತೆ 12 ಮಂದಿ ನಾವಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ 11 ಮಂದಿ ಭಾರತೀಯ ನಾವಿಕರಲ್ಲಿ ಕಾರವಾರದ ನಾವಿಕರೊಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ. ವಾಣಿಜ್ಯ ಹಡಗುಗಳ ಮೇಲಿನ ದಾಳಿಯನ್ನು … Continued

ಹಾಗಾದ್ರೆ ಕೇರಳದ ಕಾಂಗ್ರೆಸ್‌ ಸಿಎಂ, ತಮಿಳುನಾಡು ಟಿವಿಕೆ ಸಿಎಂ ಕೂಡ ಮತಗಳ್ಳರೇ: ಸಿಜೆಪಿ ಹೇಳಿಕೆಗೆ ಚೇತನ್ ಅಹಿಂಸಾ ಆಕ್ಷೇಪ

ಬೆಂಗಳೂರು : ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಎಸ್‌ಐಆರ್‌ ಬಗ್ಗೆ ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿಪಕ್ಷಗಳ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ಈ … Continued

ದೆಹಲಿಯಲ್ಲಿ 24 ಗಂಟೆ ಮೊಬೈಲ್ ಇಂಟರ್‌ನೆಟ್ ಸ್ಥಗಿತ : 4 ಕಿಮೀ ವ್ಯಾಪ್ತಿಗೆ ನಿರ್ಬಂಧ, ನಿರ್ಬಂಧಿತ ಮೆಟ್ರೋ ನಿಲ್ದಾಣಗಳ ಸಂಖ್ಯೆ ಇಳಿಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದಾರೆ. ದೆಹಲಿಯ ಜನಪಥ್‌–ಕರ್ತವ್ಯ ಪಥ್‌ ವೃತ್ತದ ಸುತ್ತಲಿನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಶನಿವಾರ ರಾತ್ರಿ 10 ಗಂಟೆಯವರೆಗೆ, ಒಟ್ಟು 24 ಗಂಟೆಗಳ ಕಾಲ ಮೊಬೈಲ್ … Continued

ಮೂರು ರಾಜ್ಯಗಳ 10 ರಾಜ್ಯಸಭಾ ಸೀಟುಗಳಲ್ಲಿ ಬಿಜೆಪಿ ಅವಿರೋಧ ಆಯ್ಕೆ ; ಎಸ್‌ಪಿಗೆ 2ರಲ್ಲಿ ಗೆಲುವು

ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ರಾಜ್ಯಸಭಾ ಚುನಾವಣೆಯಲ್ಲಿ 10 ಸ್ಥಾನಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ರಾಜ್ಯಗಳ ಒಟ್ಟು 12 ರಾಜ್ಯಸಭಾ ಸ್ಥಾನಗಳಿಗೆ ಸಂಬಂಧಿಸಿದ ಚುನಾವಣೆ ಫಲಿತಾಂಶದಲ್ಲಿ ಉತ್ತರ … Continued

ಪಶ್ಚಿಮ ಬಂಗಾಳ ಉಪಚುನಾವಣೆ : ಮುಸ್ಲಿಮರು 70% ಇರುವ ರೆಜಿನಗರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆದ್ದ ಬಿಜೆಪಿ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮುಸ್ಲಿಮರೇ ಹೆಚ್ಚಿನ ಜನಸಂಖ್ಯೆ ಹೊಂದಿರುವ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 75,816 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ರಾಜಕೀಯ ಮುನ್ನಡೆ ದಾಖಲಿಸಿದೆ. ಸುಮಾರು ಶೇ. 70ರಷ್ಟು ಮತದಾರರು ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರು ಇರುವ ರೆಜಿನಗರ … Continued

ಬೈಇಲೆಕ್ಷನ್‌ : ನಂದಿಗ್ರಾಮದಲ್ಲಿ ಶೇ.75ಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಗೆಲುವು, ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳದ ಪ್ರತಿಷ್ಠೆಯ ಕಣವಾಗಿದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸಿದ್ದು, ಕ್ಷೇತ್ರವನ್ನು ತನ್ನ ಹಿಡಿತದಲ್ಲೇ ಉಳಿಸಿಕೊಂಡಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮಾಜಿ ಆಪ್ತ ಸಹಾಯಕ ಚಂದ್ರನಾಥ ರಾಥ್ ಅವರ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ಹಸಿನ್ ರಾಣಿ ರಾಥ್ ಅವರು ತಮ್ಮ ಸಮೀಪದ … Continued