ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಪ್ರವಾಸಿಗರು ಸಾವು, ಮತ್ತೊಬ್ಬ ನಾಪತ್ತೆ

ಕಾರವಾರ : ಸಮುದ್ರಕ್ಕಿಳಿದು ಮಸ್ತಿಯಲ್ಲಿ ತೊಡಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಇಬ್ಬರು ಪ್ರವಾಸಿಗರು ನೀರುಪಾಲಾಗಿದ್ದು, ಮತ್ತೊಬ್ಬ ಪ್ರವಾಸಿಗ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ದುಬ್ಬನಶಸಿ ಕಡಲತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಇಬ್ಬರು ಪ್ರವಾಸಿಗರು ಮುಳುಗಿ ಮೃತಪಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೃತರನ್ನು ಜಾರ್ಖಂಡ ಮೂಲದ ಶೋಭಾ ದಾಸ್ (23) ಹಾಗೂ ಬೆಂಗಳೂರಿನ ಮಹಮ್ಮದ್ ಅಕ್ರಂ (23) ಎಂದು ಗುರುತಿಸಲಾಗಿದೆ.

ಜಾರ್ಖಂಡ್ ಮೂಲದ ಶೋಭಾ ದಾಸ್ (23) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮಹಮ್ಮದ್ ಅಕ್ರಂ (23) ಎಂಬವರನ್ನು ರಕ್ಷಿಸಿದ ನಂತರ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಒಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮತ್ತೊಬ್ಬರು ಅಲೆಯ ರಭಸಕ್ಕೆ ಕೊಚ್ಚಿಕೊಂಡು  ಹೋಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮತ್ತೆ ಮೂವರನ್ನು ಸ್ಥಳೀಯ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ಸುಮಾರು 16 ಜನರ ಕಂಪನಿ ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿತ್ತು. ಪ್ರವಾಸದ ಭಾಗವಾಗಿ ತಂಡದ ಸದಸ್ಯರು ದುಬ್ಬನಶಸಿ ಕಡಲತೀರಕ್ಕೆ ತೆರಳಿದ್ದು, ಅಲ್ಲಿ ಸಮುದ್ರಕ್ಕಿಳಿದು ಸಂಭ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ : ನದಿ ಜೋಡಣೆ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ, ಪ್ರಧಾನಿ ಮೋದಿ, ಸಿಎಂ ಡಿಕೆಶಿಗೆ ಪತ್ರ ರವಾನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement