ಹಾಲು, ಮೊಸರು, ಬಸ್ ಪ್ರಯಾಣ ದರ ಹೆಚ್ಚಳದ ಬೆನ್ನಲ್ಲೇ ಹೊಟೇಲ್‌ಗಳಲ್ಲಿ ಕಾಫಿ, ಟೀ, ತಿನಿಸುಗಳ ದರ ಹೆಚ್ಚಳ !

ಬೆಂಗಳೂರು : ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಶೇ. 10ರಿಂದ 15ರಷ್ಟು ಹೆಚ್ಚಿಸಲಾಗಿದೆ. ಅಕ್ಕಿ, ಹಾಲು, ಬೇಳೆ ಸೇರಿದಂತೆ ಅಡುಗೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ಹೋಟೆಲ್‌ಗಳಲ್ಲಿ ಪ್ರತಿನಿತ್ಯ ಉಪಾಹಾರ ಸೇವಿಸುವ ಗ್ರಾಹಕರಿಗೆ ಬೆಲೆ ಏರಿಕೆಯ … Continued

ಅಮೆರಿಕ ಚುನಾವಣೆಯಲ್ಲಿ ಟ್ರಂಪ್‌ಗೆ ಹಿನ್ನಡೆ ; ಭಾರತದ ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ಬಂಪರ್‌ ಲಾಭ !

ಮುಂಬೈ: ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಭರ್ಜರಿ ಗೆಲುವು, ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ, ವಿದೇಶಿ ಹೂಡಿಕೆದಾರರ ಮರುಖರೀದಿ ಹಾಗೂ ಅಮೆರಿಕದ ವಾಲ್‌ಸ್ಟ್ರೀಟ್‌ನಲ್ಲಿನ ಷೇರುಪೇಟೆ ಚೇತರಿಕೆ ಭಾರತೀಯ ಷೇರುಮಾರುಕಟ್ಟೆಯಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಗುರುವಾರ ಬೆಳಗ್ಗೆ ಮಾರುಕಟ್ಟೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರಿ ಏರಿಕೆ ಕಂಡಿದ್ದು, ಕೆಲವೇ ಗಂಟೆಗಳಲ್ಲಿ ಹೂಡಿಕೆದಾರರ … Continued

ʼತಿಗಣೆ ಕಾಟದಿಂದ ಮುಕ್ತಿ ಕೊಡಿಸಿದ್ರೆ ಹಣ್ಣು-ಕಾಯಿ ಮಾಡಿಸ್ತೀನಿ ತಾಯಿ..ʼ ; ಸವದತ್ತಿ ಯಲ್ಲಮ್ಮ ದೇವಿ ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್‌

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಣ, ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳ ಜೊತೆ ತಮ್ಮ ವಿಭಿನ್ನ ಬೇಡಿಕೆಗಳನ್ನು ಬರೆದ ಪತ್ರಗಳನ್ನೂ ಆಗಾಗ ಹಾಕುತ್ತಾರೆ. ಈ ಬಾರಿ  ಮನೆಯಲ್ಲಿನ ತಿಗಣೆಗಳ ಕಾಟದಿಂದ ಮುಕ್ತಿ ದೊರೆತರೆ ದೇವಿಗೆ ಹಣ್ಣು, ಕಾಯಿ ಅರ್ಪಿಸುವುದಾಗಿ ಭಕ್ತರೊಬ್ಬರು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮನಿಗೆ ಹರಕೆ … Continued

ಈಗ ನಂದಿನಿ ತುಪ್ಪ, ಬೆಣ್ಣೆ, ಪನೀರ್ ಬೆಲೆಯಲ್ಲೂ ಭಾರೀ ಹೆಚ್ಚಳ

ಬೆಂಗಳೂರು: ಸಾರ್ವಜನಿಕರಿಗೆ ಕೆಎಂಎಫ್ (KMF) ಮತ್ತೊಂದು ಶಾಕ್ ನೀಡಿದ್ದು, ಹಾಲು, ಮೊಸರು ಬೆಲೆ ಹೆಚ್ಚಳದ ಬೆನ್ನಲ್ಲೇ ನಂದಿನಿ ತುಪ್ಪ (Nandini Ghee), ಬೆಣ್ಣೆ ಹಾಗೂ ಪನೀರ್ ಬೆಲೆಗಳನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ನವೆಂಬರ್ 4 ರಿಂದಲೇ ಜಾರಿಗೆ ಬರುವಂತೆ ಈ ಹೊಸ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಪ್ರಮುಖವಾಗಿ ನಂದಿನಿ ತುಪ್ಪದ ಬೆಲೆ ಲೀಟರ್‌ಗೆ … Continued

ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ–ಎಸ್‌ಪಿ) ಅಧ್ಯಕ್ಷ, ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಬುಧವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಉದ್ದೇಶದಿಂದ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರಿ ಹಾಗೂ ಎನ್‌ಸಿಪಿ–ಎಸ್‌ಪಿ ಸಂಸದೆ ಸುಪ್ರಿಯಾ ಸುಳೆ … Continued

ತರಗತಿಯೊಳಗೆ ಶಿಕ್ಷಕಿ ಎದುರೇ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವು

ನವದೆಹಲಿ: ತರಗತಿಯೊಳಗೆ ಶಿಕ್ಷಕಿ ಎದುರೇ ಏಕಾಏಕಿ ಕುಸಿದು ಬಿದ್ದ ಮೂರನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ  ಘಟನೆ ಪೂರ್ವ ದೆಹಲಿಯ ಮಯೂರ ವಿಹಾರದ ಲವ್ಲಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಬಾಲಕಿ ಕುಸಿದು ಬೀಳುವ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಸುಮಾರು 9:52ರ ವೇಳೆಗೆ ಪೊಲೀಸರಿಗೆ … Continued