ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ವಿಜಯಪುರ | ಗುಂಡಿನ ದಾಳಿ ನಡೆಸಿ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡೇವಾಡಿ ಆಸ್ಪತ್ರೆ ಬಳಿ ಎರಡು ದಿನಗಳ ಹಿಂದೆ ನಡೆದಿದ್ದ ಗುಂಡಿನ ದಾಳಿ ಹಾಗೂ ಯಾಸೀನ್ ಝುಬೇರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿ ಗುಂಡು ಹಾರಿಸಿ ಗೆ ಪೊಲೀಸರು ಬಂಧಿಸಿದ್ದಾರೆ.
ಸಮೀರ್ ಮುಲ್ಲಾ ಎಂಬಾತ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಬಲಗಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಗೊಂಡ ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ಪ್ರಕಾರ, ವಿಜಯಪುರ ತಾಲೂಕಿನ ಟಕ್ಕೇ ಗ್ರಾಮದ ನಿವಾಸಿ ಯಾಸೀನ್ ಎಂಬಾತನನ್ನು ನವೆಂಬರ್ 5ರ ಸಂಜೆ ಮುಂಡೇವಾಡಿ ಆಸ್ಪತ್ರೆಯ ಹೊರಭಾಗದಲ್ಲಿ ದುಷ್ಕರ್ಮಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿತ್ತು. ಪತ್ನಿಗೆ ವೈದ್ಯಕೀಯ ತಪಾಸಣೆ ಮಾಡಿಸಿ ಆಸ್ಪತ್ರೆಯಿಂದ ವಾಪಸ್‌ ಬರುತ್ತಿದ್ದ ವೇಳೆ ಈ ದಾಳಿ ನಡೆದಿತ್ತು.
ಮೃತ ಯಾಸೀನ್ ಝುಬೇರ್ ಹಾಗೂ ಪ್ರಮುಖ ಆರೋಪಿ ಸಮೀರ್ ಮುಲ್ಲಾ ಒಂದೇ ಗ್ರಾಮದವರಾಗಿದ್ದು, ಪರಸ್ಪರ ಪರಿಚಯಸ್ಥರಾಗಿದ್ದರು. ಗ್ರಾಮದ ಉರೂಸ್ ಕಾರ್ಯಕ್ರಮದ ವೇಳೆ ಧ್ವನಿವರ್ಧಕದ ವಿಚಾರವಾಗಿ ಯಾಸೀನ್ ಮತ್ತು ಸಮೀರ್ ಮುಲ್ಲಾ ತಂಡಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಾಸೀನ್ ಹಾಗೂ ಆತನ ತಂಡ ಸಮೀರ್ ಮುಲ್ಲಾ ಮತ್ತು ಆತನ ಸಹಚರರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಅಕ್ಟೋಬರ್ 19ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಯಾಸೀನ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಆದರೆ, ಯಾಸೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.
ಈ ಹಿಂದಿನ ಗಲಾಟೆಯ ದ್ವೇಷದ ಹಿನ್ನೆಲೆಯಲ್ಲಿ ಸಮೀರ್ ಮುಲ್ಲಾ ಹಾಗೂ ಆತನ ಸಹಚರರು ನವೆಂಬರ್ 5ರಂದು ಯಾಸೀನ್ ಮೇಲೆ ಪ್ರತೀಕಾರದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂದು ಚೆಕ್‌ಅಫ್‌ಗಾಗಿ ಪತ್ನಿಯನ್ನು ಮುಂಡೇವಾಡಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ ಯಾಸೀನ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಮೃತನ ಪತ್ನಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತನಿಖೆ ವೇಳೆ ಹತ್ಯೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿರುವುದು ಪತ್ತೆಯಾಗಿತ್ತು. ಈ ಪೈಕಿ ಕೆಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಮೀರ್ ಮುಲ್ಲಾ ಅತಾಲಟ್ಟಿ ಗ್ರಾಮದ ಸಮೀಪ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಇಂದು . ಶನಿವಾರ ಆತನನ್ನು ಬಂಧಿಸಲು ಹೋಗಿದ್ದರು. ಈ ವೇಳೆ ಪೊಲೀಸರನ್ನು ಕಂಡ ಸಮೀರ್ ತನ್ನ ಬಳಿಯಿದ್ದ ದೇಸೀ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಎಚ್ಚರಿಕೆ ನೀಡಿದರೂ ಆತ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದ ಆಮಿಷ : ನಕಲಿ ಟ್ರೇಡಿಂಗ್ ಆ್ಯಪ್‌ ಮೂಲಕ ವ್ಯಕ್ತಿಗೆ 46 ಲಕ್ಷ ರೂ. ಪಂಗನಾಮ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement