ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿ ಓಡಿಸುವ ಮದ್ದಿಗೆ ಬೆಂಕಿ ಹಚ್ಚಿದ ಬಾಲಕ ಸಾವು

ಕಲಬುರಗಿ : ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜಿಲ್ಲೆಯ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ಎಂದು ಭಾವಿಸಿ ಹಂದಿ ಓಡಿಸಲು ಇಟಿದ್ದ ಸ್ಫೋಟಕ ವಸ್ತುವಿಗೆ ಬೆಂಕಿ ಹಚ್ಚಿದ ಬಾಲಕನ ತಲೆ ಛಿದ್ರ ಛಿದ್ರವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಮೃತ ಬಾಲಕನನ್ನು ಭೀಮರಾಯ ಎಂದು ಗುರುತಿಸಲಾಗಿದೆ. ಕೃಷಿ ಜಮೀನಿಗೆ ನುಗ್ಗಿ ಬೆಳೆಗಳಿಗೆ ಹಾನಿ ಮಾಡುತ್ತಿದ್ದ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದನ್ನು ದೀಪಾವಳಿಗೆ ತಂದಿಟ್ಟಿದ್ದ ಪಟಾಕಿ ಎಂದು ಭಾವಿಸಿ ಬಾಲಕ ಅದಕ್ಕೆ ಬೆಂಕಿ ಹಚ್ಚಿದ್ದರಿಂದ ಅದು ಸ್ಪೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹಬ್ಬದ ದಿನ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೇವಿರಮ್ಮನ ಬೆಟ್ಟ ಏರುವಾಗ ದುರಂತ: ದರ್ಶನಕ್ಕೆ ತೆರಳುತ್ತಿದ್ದ ಭಕ್ತ ಹೃದಯಾಘಾತದಿಂದ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement