

ಕಲಬುರಗಿ : ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜಿಲ್ಲೆಯ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ಎಂದು ಭಾವಿಸಿ ಹಂದಿ ಓಡಿಸಲು ಇಟಿದ್ದ ಸ್ಫೋಟಕ ವಸ್ತುವಿಗೆ ಬೆಂಕಿ ಹಚ್ಚಿದ ಬಾಲಕನ ತಲೆ ಛಿದ್ರ ಛಿದ್ರವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಮೃತ ಬಾಲಕನನ್ನು ಭೀಮರಾಯ ಎಂದು ಗುರುತಿಸಲಾಗಿದೆ. ಕೃಷಿ ಜಮೀನಿಗೆ ನುಗ್ಗಿ ಬೆಳೆಗಳಿಗೆ ಹಾನಿ ಮಾಡುತ್ತಿದ್ದ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದನ್ನು ದೀಪಾವಳಿಗೆ ತಂದಿಟ್ಟಿದ್ದ ಪಟಾಕಿ ಎಂದು ಭಾವಿಸಿ ಬಾಲಕ ಅದಕ್ಕೆ ಬೆಂಕಿ ಹಚ್ಚಿದ್ದರಿಂದ ಅದು ಸ್ಪೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹಬ್ಬದ ದಿನ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.





ನಿಮ್ಮ ಕಾಮೆಂಟ್ ಬರೆಯಿರಿ