ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಶಾಸಕ ಯತ್ನಾಳ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು : ಕಾಂಗ್ರೆಸ್‌ ಶಾಸಕ ಶಿವಾನಂದ ಎಸ್. ಪಾಟೀಲ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಮಾನನಷ್ಟ ಮೊಕದ್ದಮೆ ಪ್ರಕ್ರಿಯೆ ರದ್ದು ಕೋರಿ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ ಎಂದು ಬಾರ್‌ ಬೆಂಚ್‌ ವರದಿ ಮಾಡಿದೆ.
ಅರ್ಜಿದಾರರ ಹೇಳಿಕೆಗಳು ಮೇಲ್ನೋಟಕ್ಕೆ ದೂರುದಾರ ಶಿವಾನಂದ ಪಾಟೀಲ ಅವರ ಚಾರಿತ್ರ್ಯ ಹಾಗೂ ವರ್ಚಸ್ಸಿಗೆ ಧಕ್ಕೆ ತರುವಂತಿವೆ. ವಿಚಾರಣಾ ನ್ಯಾಯಾಲಯವು ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಸಂಜ್ಞೆ ತೆಗೆದುಕೊಂಡಿದೆ. ಇದು ದೋಷಪೂರಿತ ಕ್ರಮ ಎಂದು ಹೇಳಲಾಗದು. ಈ ಹೇಳಿಕೆಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ನಿಜವಾಗಿಯೂ ಗೌರವ ಕಡಿಮೆಯಾಗಿದೆಯೇ ಅಥವಾ ಇಲ್ಲವೇ ಎಂಬುದು ವಿಚಾರಣಾ ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಿದೆ ಎಂದು ಪೀಠ ಹೇಳಿದೆ.

ಖಾಸಗಿ ಯೂಟ್ಯೂಬ್ ವಾಹಿನಿಯೊಂದರಲ್ಲಿ ಮಾತನಾಡಿದ್ದ ಯತ್ನಾಳ ಅವರು , ಶಿವಾನಂದ ಪಾಟೀಲ ವಿರುದ್ಧ ತೀವ್ರ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ೆಂದು ಆರೋಪಿಸಲಾಗಿದೆ. ಈ ಸಂಬಂಧ ಶಿವಾನಂದ ಪಾಟೀಲ ಅವರು 2025ರ ಜುಲೈ 18ರಂದು ಬೆಂಗಳೂರಿನ 42ನೇ ಹೆಚ್ಚುವರಿ ಮ್ಯಾಜಿಸ್ಪ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆ ಮೂಲಕ ನನ್ನ ಗೌರವ, ಘನತೆ ಮತ್ತು ಖ್ಯಾತಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಶಿವಾನಂದ ಪಾಟೀಲ ಅವರು 2025ರ ಜುಲೈ 18ರಂದು ಬೆಂಗಳೂರಿನ 42ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 356(2)ರ ಅಡಿಯಲ್ಲಿ ಪ್ರಕರಣದ ಸಂಜ್ಞೆ ತೆಗೆದುಕೊಂಡಿದ್ದ ನ್ಯಾಯಾಲಯ, 2026ರ ಜನವರಿ 24ರಂದು ಯತ್ನಾಳ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಯತ್ನಾಳ ಅವರು ಸತ್ರ ನ್ಯಾಯಾಲಯಕ್ಕೆ ಹೋಗಿದ್ದರು. ಸತ್ರ ನ್ಯಾಯಾಲಯ 2026ರ ಆಗಸ್ಟ್ 18ರಂದು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಯತ್ನಾಳ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಮುಖ ಸುದ್ದಿ :-   ಮೈಸೂರು : ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ 70 ವರ್ಷದ ವೃದ್ಧೆಗೆ ಜ್ಯೂಸ್ ಕೊಟ್ಟು ಉಪಚಾರ ಮಾಡಿದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement