ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಮಾಜಿ ಸಿಎಂ ಸ್ಟಾಲಿನ್‌ಗೆ ಸೋಲುಣಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ಹಾಗೂ ಡಿಎಂಕೆ (DMK) ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿ ದೇಶದ ಗಮನ ಸೆಳೆದಿದ್ದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಕೊಳತ್ತೂರು ಕ್ಷೇತ್ರದ ಶಾಸಕ ವಿ.ಎಸ್. ಬಾಬು (75) ಅವರು ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯಲ್ಲಿ ಸುದೀರ್ಘಕಾಲ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮಧ್ಯಾಹ್ನ 2:24ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಬು ಅವರನ್ನು ಕಳೆದ ಸೆಪ್ಟೆಂಬರ್‌ನಿಂದಲೇ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ದೃಢಪಡಿಸಿದೆ.
35 ವರ್ಷಗಳ ರಾಜಕೀಯ ಜೀವನದಲ್ಲಿ ಮೊದಲ ಸೋಲು ಕಂಡಿದ್ದ ಸ್ಟಾಲಿನ್
2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿ.ಎಸ್. ಬಾಬು, ಅಂದಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಸುಮಾರು 35 ವರ್ಷಗಳ ರಾಜಕೀಯ ಚುನಾವಣಾ ಜೀವನದಲ್ಲಿ ಸ್ಟಾಲಿನ್ ಅವರಿಗೆ ಎದುರಾದ ಮೊದಲ ಸೋಲು ಇದಾಗಿತ್ತು.

ಪ್ರಮುಖ ಸುದ್ದಿ :-   ಚುನಾವಣೆಗಳು ಅಕ್ರಮವಾಗಿದ್ದರೆ ನೀವ್ಯಾಕೆ ಬಹಿಷ್ಕರಿಸಬಾರದು? ಚಿಕಾಗೋ ವಿವಿಯ ಸಂವಾದದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಏನ್‌ ಉತ್ತರ ಕೊಟ್ರು ?

ಮಾಜಿ ಡಿಎಂಕೆ ಶಾಸಕರಾಗಿದ್ದ ಬಾಬು, 2026ರ ಫೆಬ್ರವರಿ 7ರಂದು ಡಿಎಂಕೆ ತೊರೆದು ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಳಿಕ ಟಿವಿಕೆ ಅಭ್ಯರ್ಥಿಯಾಗಿ ಕೊಳತ್ತೂರು ಕ್ಷೇತ್ರದಿಂದ ಕಣಕ್ಕಿಳಿದು ಸ್ಟಾಲಿನ್ ವಿರುದ್ಧ 8,795 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಾಬು 82,997 ಮತಗಳನ್ನು ಪಡೆದಿದ್ದರೆ, ಸ್ಟಾಲಿನ್ 74,202 ಮತಗಳನ್ನು ಗಳಿಸಿದ್ದರು. ಎಐಎಡಿಎಂಕೆ ಅಭ್ಯರ್ಥಿ ಪಿ. ಸಂತಾನ ಕೃಷ್ಣನ್ 18,430 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.
ಏಳು ಬಾರಿ ಶಾಸಕರಾಗಿದ್ದ ಸ್ಟಾಲಿನ್
1989ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಗೆ ಪ್ರವೇಶಿಸಿದ್ದ ಎಂ.ಕೆ. ಸ್ಟಾಲಿನ್, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಚೆನ್ನೈನ ತೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ಅವರು, ಬಳಿಕ ಕೊಳತ್ತೂರು ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದರು.
2021ರಲ್ಲಿ ಮುಖ್ಯಮಂತ್ರಿಯಾದ ಸ್ಟಾಲಿನ್, 2026ರ ಚುನಾವಣೆಯಲ್ಲಿ ಇದೇ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ವಿ.ಎಸ್. ಬಾಬು ವಿರುದ್ಧ ಸೋಲು ಅನುಭವಿಸಿದ್ದರು. ಈ ಮೂಲಕ ಸುದೀರ್ಘ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಚುನಾವಣಾ ಸೋಲು ಕಂಡಿದ್ದರು.

ಪ್ರಮುಖ ಸುದ್ದಿ :-   ಹಿರಿಯ ಪುತ್ರಿ ಐಶ್ವರ್ಯಾ ವಿರುದ್ಧ ಮಾನಹಾನಿಕರ ಆರೋಪ: ನಟ ಅರ್ಜುನ ಸರ್ಜಾ ದೂರು ದಾಖಲು

ಸ್ಟಾಲಿನ್ ಅವರಂತಹ ಪ್ರಭಾವಿ ನಾಯಕನಿಗೆ ಸೋಲುಣಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ವಿ.ಎಸ್. ಬಾಬು ಅವರ ನಿಧನ ತಮಿಳುನಾಡಿನ ರಾಜಕೀಯ ವಲಯದಲ್ಲಿ ಶೋಕಕ್ಕೆ ಕಾರಣವಾಗಿದೆ.
ಸ್ಟಾಲಿನ್ ಸಂತಾಪ
ವಿ.ಎಸ್. ಬಾಬು ನಿಧನಕ್ಕೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಾಬು ಅವರ ನಿಧನದ ಸುದ್ದಿ ಆಘಾತ ಮತ್ತು ದುಃಖ ತಂದಿದೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡು ಸಚಿವ ಆಧವ್ ಅರ್ಜುನ ಕೂಡ ಬಾಬು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಾಬು ಸದಾ ನಗುಮುಖದ ವ್ಯಕ್ತಿಯಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement