ಬಿಜೆಪಿ ಸೇರಿದ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ; ರಾಷ್ಟ್ರೀಯ ಒಬಿಸಿ ಮೋರ್ಚಾದಲ್ಲಿ ವಿಶೇಷ ಆಹ್ವಾನಿತರಾಗಿ ನೇಮಕ

ನವದೆಹಲಿ: ಖ್ಯಾತ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ಹಿಂದುಳಿದ ವರ್ಗಗಳ (ಒಬಿಸಿ) ರಾಷ್ಟ್ರೀಯ ಮೋರ್ಚಾದ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಮೂಲಕ ಚಾಹಲ್ ಅವರು ಬಿಜೆಪಿಯ ಸಂಘಟನಾತ್ಮಕ ವ್ಯವಸ್ಥೆಗೆ ಅಧಿಕೃತವಾಗಿ ಪ್ರವೇಶ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಅಧ್ಯಕ್ಷ ಹಾಗೂ … Continued

ಬಿಜೆಪಿ ಒಬಿಸಿ ಮೋರ್ಚಾಕ್ಕೆ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ: ಕರ್ನಾಟಕದ ಪ್ರಮೋದ ಮಧ್ವರಾಜಗೆ ಮಹತ್ವದ ಹೊಣೆ

ನವದೆಹಲಿ: ಬಿಜೆಪಿಯ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಷ್ಟ್ರೀಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಹೊಸಬರಿಗೆ ಜವಾಬ್ದಾರಿ ವಹಿಸಲಾಗಿದೆ. ಈ ನೇಮಕಾತಿಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಘೋಷಿಸಿದ್ದು, ಪಕ್ಷದ ಕೇಂದ್ರ ಕಚೇರಿ ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ ನೇಮಕಾತಿಗಳು ತಕ್ಷಣದಿಂದಲೇ … Continued

2027ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ ; ಮುಂದಿನ ವರ್ಷ ಒಟ್ಟು ರಜೆಗಳು ಎಷ್ಟು ?

ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) 2027ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳು (General Holidays) ಮತ್ತು ಸರ್ಕಾರಿ ನೌಕರರ ಪರಿಮಿತ ರಜಾ ದಿನಗಳ (Restricted Holidays) ಅಧಿಕೃತ ಪಟ್ಟಿಯನ್ನು ಶನಿವಾರ (ನವೆಂಬರ್ 21) ಪ್ರಕಟಿಸಿದೆ.  2027ನೇ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 18 ಸಾರ್ವತ್ರಿಕ ರಜೆಗಳು ಹಾಗೂ 19 ಪರಿಮಿತ ರಜೆಗಳನ್ನು (RH) ಸರ್ಕಾರ ಪ್ರಕಟಿಸಿದೆ. … Continued

ಬಸವ ಮಂಟಪ ಕೃತಿ ವಿವಾದ : ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಬೆಂಗಳೂರು: ತಮ್ಮ ಪುಸ್ತಕದಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಹಾಗೂ ಜಗಜ್ಯೋತಿ ಬಸವಣ್ಣ ಹಾಗೂ ಲಿಂಗಾಯತ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿವಾದಿತ ಕನ್ನಡ ಪುಸ್ತಕ ‘ಬಸವ ಮಂಟಪ’ದ ಲೇಖಕ, ಅಮೆರಿಕ ನಿವಾಸಿ ರವಿ ಹಂಜ್ ಅವರನ್ನು ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. … Continued

ನಿಗಮ-ಮಂಡಳಿಗಳ ಅಧ್ಯಕ್ಷರು, ಮುಖ್ಯ ಸಚೇತಕರಾಗಿ 18 ಕಾಂಗ್ರೆಸ್‌ ನಾಯಕರ ನೇಮಕ : ಪಟ್ಟಿ ಬಿಡುಗಡೆ

ನವದೆಹಲಿ/ಬೆಂಗಳೂರು: ಕರ್ನಾಟಕದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ 18 ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್‌ ಪಟ್ಟಿ ಪ್ರಕಟಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಮುಖ ರಾಜಕೀಯ ಹುದ್ದೆಗಳ ಪೈಕಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕ ತನ್ವೀರ್ ಸೇಠ್ ಅವರನ್ನು … Continued

ಮಕ್ಕಳ ಆಟದ ನೋಟು ನೀಡಿ ವ್ಯಾಪಾರಿಗೆ 40 ಲಕ್ಷ ರೂ. ವಂಚನೆ ; ಪ್ರತಿತಂತ್ರದಿಂದ ವಂಚಕರನ್ನೇ ಖೆಡ್ಡಾಕ್ಕೆ ಬೀಳಿಸಿದ ವ್ಯಾಪಾರಿ ಕುಟುಂಬ !

ಅಸಲಿ ನೋಟುಗಳಂತೆಯೇ ಕಾಣುವ ಹಣದ ಕಂತೆಗಳು… ಬ್ಯಾಂಕ್‌ಗಳಲ್ಲಿ ಹಣವನ್ನು ಪ್ಯಾಕ್ ಮಾಡಲು ಬಳಸುವ ಪಟ್ಟಿಗಳಿಂದಲೇ ಸುತ್ತಿ ಸಿದ್ಧಪಡಿಸಿದ್ದ ನೋಟಿನ ಬಂಡಲ್‌ಗಳು… ಆದರೆ ಆ ಕಂತೆಗಳ ಒಳಗೆ ಇದ್ದದ್ದು ಮಾತ್ರ ಮಕ್ಕಳ ಆಟವಾಡಲು ಬಳಸುವ ನಕಲಿ ನೋಟುಗಳು! ಇಂತಹ ತಂತ್ರ ಬಳಸಿ ಗುಜರಾತ್‌ನ ಮಸಾಲೆ ವ್ಯಾಪಾರಿಯೊಬ್ಬರಿಗೆ ಬರೋಬ್ಬರಿ 40 ಲಕ್ಷ ರೂ. ವಂಚನೆ ಮಾಡಿದ ಘಟನೆ ನಡೆದಿದೆ. … Continued

ಖಲಿಸ್ತಾನಿ ಉಗ್ರ ಗುರುಪತ್ವಂತ್ ಪನ್ನುನ್ ಹತ್ಯೆ ಸಂಚು: ಭಾರತೀಯನಿಗೆ ಅಮೆರಿಕದಲ್ಲಿ 19 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ನ್ಯೂಯಾರ್ಕ್: ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹಾಗೂ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸುಪಾರಿ ನೀಡಿದ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾಗೆ ಅಮೆರಿಕದ ನ್ಯಾಯಾಲಯ ಶುಕ್ರವಾರ 19 ವರ್ಷ ಏಳು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಕೊಂಡಿದ್ದರು. … Continued

‘ಭಾರತವನ್ನು ನೋಡಿ’: ಬಡ್ಡಿದರ ಹೆಚ್ಚಳ ಮಾಡಿದ್ದಕ್ಕೆ ಅಮೆರಿಕದ ಕೇಂದ್ರ ಬ್ಯಾಂಕ್ ವಿರುದ್ಧ ಟ್ರಂಪ್ ವಾಗ್ದಾಳಿ

ವಾಷಿಂಗ್ಟನ್ : ಅಮೆರಿಕದ ಆರ್ಥಿಕತೆ ಉತ್ತಮ ಸಾಧನೆ ಮಾಡುತ್ತಿದ್ದರೂ ಬಡ್ಡಿದರಗಳನ್ನು ಹೆಚ್ಚಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಕೇಂದ್ರ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ (ಫೆಡ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಬಡ್ಡಿದರ ಕಡಿಮೆ ಇರುವುದರಿಂದ ಶೇ. 7ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಲಾಗುತ್ತಿದೆ. ಅದೇ … Continued