

ನವದೆಹಲಿ/ಬೆಂಗಳೂರು: ಕರ್ನಾಟಕದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ 18 ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಪ್ರಕಟಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಪ್ರಮುಖ ರಾಜಕೀಯ ಹುದ್ದೆಗಳ ಪೈಕಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕ ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬೇಳೂರು ಗೋಪಾಲಕೃಷ್ಣ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಹಾಗೂ ಮಂಜುನಾಥ ಭಂಡಾರಿ ಅವರನ್ನು ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.


ನಿಗಮ-ಮಂಡಳಿಗಳ ನೂತನ ಅಧ್ಯಕ್ಷರು
ಬಿ. ಶಿವಣ್ಣ – ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ.
ಕೆ. ಷಡಕ್ಷರಿ – ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ.
ಪಿ.ಎಂ. ಅಶೋಕ – ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ.
ಎ.ಆರ್. ಕೃಷ್ಣಮೂರ್ತಿ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ.
ಹಂಪನಗೌಡ ಬಾದರ್ಲಿ – ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ.
ಡಿ.ಜಿ. ಶಾಂತನಗೌಡ – ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ.
ಜಿ.ಎಚ್. ಶ್ರೀನಿವಾಸ – ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ.
ಮಹಾಂತೇಶ ಕೌಜಲಗಿ – ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ.
ಎಸ್.ಎನ್. ಸುಬ್ಬಾರೆಡ್ಡಿ – ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷ.
ಎನ್.ಎಚ್. ಕೋನರಡ್ಡಿ – ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ.
ಬಸನಗೌಡ ದದ್ದಲ್ – ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ.
ಅಲ್ಲಮಪ್ರಭು ಪಾಟೀಲ – ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ.
ಶ್ಯಾಮ್ ನಾಟೇಕರ್ – ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ.
ಎಚ್.ಸಿ. ಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆ (KAVIKA) ಅಧ್ಯಕ್ಷ.
ಸುಭಾಷ್ ರಾಠೋಡ್ – ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ.



ನಿಮ್ಮ ಕಾಮೆಂಟ್ ಬರೆಯಿರಿ