ಉತ್ತರ ಪ್ರದೇಶ ಚುನಾವಣೆ : ಕಾಂಗ್ರೆಸ್ ಕೇಳಿದ್ದ 2 ಕ್ಷೇತ್ರಗಳೂ ಸೇರಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ ಸಮಾಜವಾದಿ ಪಕ್ಷ !

ಲಕ್ನೋ : 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಐವರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಸಹರಾನ್‌ಪುರ, ಶಾಮ್ಲಿ, ಅಮ್ರೋಹಾ ಮತ್ತು ಲಲಿತಪುರ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮತ್ತೊಂದೆಡೆ, ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಕ್ಷೇತ್ರ ಹಂಚಿಕೆ ಕುರಿತು ನಡೆಯುತ್ತಿರುವ … Continued

‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 12ನೇ ಶತಮಾನದ ಸಮಾಜ ಸುಧಾರಕ ಜಗಜ್ಯೋತಿ  ಬಸವಣ್ಣನವರ ಕುರಿತು ಆಕ್ಷೇಪಾರ್ಹ ಉಲ್ಲೇಖಗಳನ್ನು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೇಖಕ ರವಿ ಹಂಜ್ ಅವರು ಬರೆದಿರುವ ‘ಬಸವ ಮಂಟಪ’ ಪುಸ್ತಕದ ಮುಟ್ಟುಗೋಲಿಗೆ ರಾಜ್ಯ ಸರ್ಕಾರಬ ಆದೇಶ ಹೊರಡಿಸಿದೆ. ವೀರಶೈವ-ಲಿಂಗಾಯತ ಸಂಘಟನೆಗಳು ಹಾಗೂ ಬಸವಣ್ಣನವರ ಅನುಯಾಯಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ಕ್ರಮ … Continued

ವಾಟ್ಸ್‌ಆ್ಯಪ್ ಚಾಟ್ ಪ್ರಕರಣ; ಎಚ್.ಡಿ. ಕುಮಾರಸ್ವಾಮಿಗೆ ಸೈಬರ್ ಪೊಲೀಸರ ನೋಟಿಸ್

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಆರೋಪಿತ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಾಟ್ಸ್‌ಆ್ಯಪ್ ಸಂಭಾಷಣೆಯನ್ನು ಬಹಿರಂಗಪಡಿಸಿದ್ದ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಮಂಗಳವಾರ ನೋಟಿಸ್ ಜಾರಿ ಮಾಡಿದ್ದಾರೆ.  ತಾವು ಬಹಿರಂಗಪಡಿಸಿರುವ ವಾಟ್ಸ್‌ಆ್ಯಪ್ ಚಾಟ್‌ನ ಮೂಲ ಮತ್ತು ಅದರ ಸತ್ಯಾಸತ್ಯತೆ ಕುರಿತು … Continued

ವಿಡಿಯೋ | ವಿಚ್ಛೇದನ, ಮತ್ತೆ ಮದುವೆ; ಹಿಂದೂ ಸಂಪ್ರದಾಯದಂತೆ ಲಕ್ನೊದಲ್ಲಿ ಜಪಾನ್ ದಂಪತಿಯ ಮರುಮದುವೆ

ಲಕ್ನೋ : ವಿಚ್ಛೇದನ ಪಡೆದು ದೂರವಾಗಿದ್ದ ಜಪಾನಿನ ದಂಪತಿ ಮತ್ತೆ ಒಂದಾಗಿದ್ದು, ಭಾರತದ ಉತ್ತರ ಪ್ರದೇಶದ ಲಕ್ನೋದಲ್ಲಿ ಸಾಂಪ್ರದಾಯಿಕವಾಗಿ ಮರುಮದುವೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. 2022ರಲ್ಲಿ ವಿಚ್ಛೇದನ ಪಡೆದಿದ್ದ ಈ ದಂಪತಿ ಬಳಿಕ ಮತ್ತೆ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದು, ನವೆಂಬರ್ 23ರಂದು ಲಕ್ನೋದ ಗೋಮತಿನಗರದಲ್ಲಿರುವ ರಾಧಾ-ಕೃಷ್ಣ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿತು. ದಂಪತಿಯ ಮಕ್ಕಳು, ಸ್ನೇಹಿತರು … Continued

ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟ ; ಜನವರಿಯಲ್ಲಿ ಜಿಪಂ, ತಾಪಂಗೆ ಚುನಾವಣೆ : ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಪಂಚಾಯತ (ZP) ಮತ್ತು ತಾಲೂಕು ಪಂಚಾಯತ (TP) ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಮುಂಬರುವ ಜನವರಿ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ ; 2027ರ ಪಂಜಾಬ್ ವಿಧಾನಸಭೆ ಚುನಾವಣೆಗೂ ಮುನ್ನ ಮೈತ್ರಿ ಘೋಷಣೆ

ನವದೆಹಲಿ: 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತೆ ಕೈಜೋಡಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರು ಮಂಗಳವಾರ (ನವೆಂಬರ್ 24) ರಾಜಕೀಯ … Continued

ಸಹೋದರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾದ ನಂತರ ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮುಂಬೈ: ಸಹೋದರಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 35 ವರ್ಷದ ವ್ಯಕ್ತಿಯೊಬ್ಬ ತೀರ್ಪು ಪ್ರಕಟವಾದ ಕೆಲವೇ ನಿಮಿಷಗಳಲ್ಲಿ ನ್ಯಾಯಾಲಯದ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನವಿ ಮುಂಬೈನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ನಾಗೇಶಬಾಬು ಲಾಡ ಎಂದು ಗುರುತಿಸಲಾಗಿದೆ. 2019ರಲ್ಲಿ ತನ್ನ ಸಹೋದರಿಯನ್ನು ಕೊಲೆ ಮಾಡಿದ್ದಲ್ಲದೆ, … Continued

ಪ್ರಿಯತಮೆಯನ್ನು ಹೊಡೆದು ಕೊಂದ ಟೆಕ್ಕಿ; ರಾತ್ರಿಯಿಡೀ ಶವದ ಪಕ್ಕದಲ್ಲೇ ಕುಳಿತಿದ್ದ, ನಂತರ ಆಂಬುಲೆನ್ಸ್‌ಗಾಗಿ ಪೊಲೀಸರಿಗೆ ಕರೆ !

ಪುಣೆ : ಇಲ್ಲಿನ ಹಿಂಜವಾಡಿ ಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ತನ್ನ ಪ್ರಿಯಕರನಿಗೆ ಬೇರೊಬ್ಬ ಯುವತಿಯ ಜೊತೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆ ಜಗಳವಾಡಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಯುವತಿಯನ್ನು ಕೊಂದ ಬಳಿಕ ಆರೋಪಿ ಇಡೀ ರಾತ್ರಿ ಆಕೆಯ ಮೃತದೇಹದ ಪಕ್ಕದಲ್ಲೇ ಕುಳಿತಿದ್ದು, ಬೆಳಗಾಗುವವರೆಗೂ ಅಲ್ಲಿಯೇ ಕಳೆದಿದ್ದಾನೆ. … Continued

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ; ಇದರ ಹಿಂದಿದೆ ಟ್ರಂಪ್ ಮಧ್ಯಸ್ಥಿಕೆ; ಜೆ.ಡಿ. ವ್ಯಾನ್ಸ್ ನೇತೃತ್ವದಲ್ಲಿ ಒತ್ತಡದ ತಂತ್ರ

ಅಮೆರಿಕದ ಪ್ರಮುಖ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್ ಅವರನ್ನು ಮತ್ತೆ ಕಂಪನಿಯ ಸಿಇಒ ಆಗಿ ಬಂದಿದ್ದಾರೆ. ಈ ಕ್ರಮವು ಎನ್ವಿಡಿಯಾಕ್ಕೆ ನಾಟಕೀಯ ಬೆಳವಣಿಗೆಯಾಗಿದೆ. ಯಾಕೆಂದರೆ ಹುವಾಂಗ್ ನಿರ್ಗಮನದ ನಂತರ ಅವರನ್ನು ಮರಳಿ ಕರೆತರುವುದನ್ನು ಕಂಪನಿಯು ಮಂಡಳಿಯು ತಳ್ಳಿಹಾಕಿತ್ತು, ಅವರ ವಿವಾಹೇತರ ಸಂಬಂಧ ಹಾಗೂ ಚೀನಾದ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ … Continued