ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಬೆಂಗಳೂರಿನ ನಾಲ್ವರು ನಾಪತ್ತೆ

ಶಿವಮೊಗ್ಗ: ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಹಿಷಿ ಗ್ರಾಮದ ಬಳಿ ತುಂಗಾ ನದಿಗೆ ತೆರಳಿದ್ದ ಬೆಂಗಳೂರಿನ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಸಂಜೆಯ ವೇಳೆಗೆ ಒಬ್ಬರ ಮೃತದೇಹ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಇತರ ಮೂವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. .ನದಿಯಲ್ಲಿ ಮುಳುಗಿದ ನಾಲ್ವರಲ್ಲಿ ಇಬ್ಬರು ಕಾನೂನು ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬರು … Continued

ಕೆಎಸ್‌ಆರ್‌ಟಿಸಿ ಪುರುಷ ನೌಕರರಿಗೆ ಗುಡ್ ನ್ಯೂಸ್ ; 15 ದಿನಗಳ ಪಿತೃತ್ವ ರಜೆ ಮಂಜೂರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಪುರುಷ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪುರುಷ ನೌಕರರಿಗೆ ತಮ್ಮ ಪತ್ನಿಯ ಹೆರಿಗೆಯ ಸಂದರ್ಭದಲ್ಲಿ 15 ದಿನಗಳ ವೇತನ ಸಹಿತ ಪಿತೃತ್ವ ರಜೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಧಿಕೃತ ಅಧಿಸೂಚನೆ … Continued

ಪ್ಯಾಕೆಟ್ ಆಹಾರಗಳಲ್ಲಿ ಅಧಿಕ ಕೊಬ್ಬು, ಸಕ್ಕರೆ, ಉಪ್ಪಿದ್ದರೆ ಎಚ್ಚರಿಕೆ ಚಿಹ್ನೆ ಕಡ್ಡಾಯ : ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

ನವದೆಹಲಿ: ಪ್ಯಾಕೆಟ್‌ಗಳಲ್ಲಿ ಮಾರಾಟ ಮಾಡುವ ಆಹಾರ ಉತ್ಪನ್ನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೊಬ್ಬು, ಸಕ್ಕರೆ ಅಥವಾ ಉಪ್ಪು ಇದ್ದರೆ, ಅವುಗಳ ಪ್ಯಾಕೆಟ್‌ನ ಮುಂಭಾಗದಲ್ಲಿ ಸ್ಪಷ್ಟವಾಗಿ ಕಾಣುವ ಎಚ್ಚರಿಕೆ ಚಿಹ್ನೆಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕೇಂದ್ರ ಸರ್ಕಾರ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಗ್ರಾಹಕರು ಆಹಾರ ಉತ್ಪನ್ನಗಳನ್ನು … Continued

ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಕಾಣಿಕೆ ; 45 ಆಭರಣಗಳ ಮೌಲ್ಯ 160 ಕೋಟಿ ರೂ.

ತಿರುಪತಿ: ಪ್ರಸಿದ್ಧ ದೇವಾಲಯ ಆಂಧ್ರಪ್ರದೇಶದ ತಿರುಪತಿಯ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತರೊಬ್ಬರು ಬರೋಬ್ಬರಿ 121 ಕೆ.ಜಿ. ತೂಕದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದಾರೆ. ಈ ಆಭರಣಗಳ ಅಂದಾಜು ಮೌಲ್ಯ 150 ಕೋಟಿ ರೂ.ಗಳಿಂದ 160 ಕೋಟಿ ರೂ.ಗಳಾಗಿದ್ದು, ತಿರುಮಲ ದೇವಸ್ಥಾನದ ಇತಿಹಾಸದಲ್ಲೇ ಭಕ್ತರೊಬ್ಬರು ನೀಡಿದ ಅತಿದೊಡ್ಡ ವೈಯಕ್ತಿಕ ಕಾಣಿಕೆ ಇದಾಗಿದೆ ಎಂದು ಸರ್ಕಾರದ ಹಾಗೂ … Continued

ರಾಹುಲ್ ಗಾಂಧಿ ಹೆಸರು, ಫೋಟೊ ಇದ್ರೆ ಇನ್‌ಸ್ಟಾಗ್ರಾಂ ಪೋಸ್ಟ್ ಬ್ಲಾಕ್; ಮೆಟಾ ವಿರುದ್ಧ ಯೂಥ್‌ ಕಾಂಗ್ರೆಸ್ ಆರೋಪ; ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರು ಅಥವಾ ಫೋಟೊ ಇರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಇನ್‌ಸ್ಟಾಗ್ರಾಂ ಸ್ವಯಂಚಾಲಿತವಾಗಿ ನಿರ್ಬಂಧಿಸುತ್ತಿದೆ ಎಂದು ಆರೋಪಿಸಿ ಯೂಥ್‌ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.  ರಾಹುಲ್ ಗಾಂಧಿ ಅವರ ಹೆಸರು ಉಲ್ಲೇಖಿಸಿರುವ ಅಥವಾ ಅವರ ಫೋಟೊಗಳನ್ನು ಒಳಗೊಂಡಿರುವ ಕಾರಣಕ್ಕಾಗಿಯೇ ಕಾಂಗ್ರೆಸ್ ಕಾರ್ಯಕರ್ತರು ಹಂಚಿಕೊಳ್ಳುವ ಪೋಸ್ಟ್‌ಗಳನ್ನು ಭಾರತದಲ್ಲಿ ವೀಕ್ಷಿಸಲು ಸಾಧ್ಯವಾಗದಂತೆ … Continued

ಬೆಂಗಳೂರು : 5.72 ಕೋಟಿ ರೂ. ಮೌಲ್ಯದ 5.72 ಕೆ.ಜಿ. ಎಂಡಿಎಂಎ ಡ್ರಗ್ಸ್‌ ವಶ

ಬೆಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು 5.72 ಕೋಟಿ ರೂ. ಮೌಲ್ಯದ 5.72 ಕೆ.ಜಿ. ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಂಗಳೂರಿನ ಗಂಗೊಂಡನಹಳ್ಳಿಯ ಇಮಾನ್ ಪಾಷಾ (28) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಆಯಿಷಾ ಸಿದ್ದಿಕಿ (27) … Continued