ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಬೆಂಗಳೂರು : 5.72 ಕೋಟಿ ರೂ. ಮೌಲ್ಯದ 5.72 ಕೆ.ಜಿ. ಎಂಡಿಎಂಎ ಡ್ರಗ್ಸ್‌ ವಶ

ಬೆಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು 5.72 ಕೋಟಿ ರೂ. ಮೌಲ್ಯದ 5.72 ಕೆ.ಜಿ. ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬೆಂಗಳೂರಿನ ಗಂಗೊಂಡನಹಳ್ಳಿಯ ಇಮಾನ್ ಪಾಷಾ (28) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಆಯಿಷಾ ಸಿದ್ದಿಕಿ (27) ಎಂದು ಗುರುತಿಸಲಾಗಿದೆ.
ನವೆಂಬರ್ 22ರಂದು ಮಧ್ಯಾಹ್ನ 12:30ರ ಸುಮಾರಿಗೆ ಆರೋಪಿಗಳು ನಿಷೇಧಿತ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಇತರ ಮಾದಕ ವಸ್ತು ಮಾರಾಟಗಾರರಿಗೆ ಹಂಚಿಕೆ ಮಾಡಲು ಕಾಯುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಈ ಸಂಬಂಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಮೆಥಿಲೀನ್ ಡೈಆಕ್ಸಿ ಮೆಥಾಂಫೆಟಮೈನ್ (Methylenedioxymethamphetamine) ಎಂಬುದು ಎಂಡಿಎಂಎಯ ಪೂರ್ಣ ಹೆಸರಾಗಿದ್ದು, ಇದನ್ನು ‘ಮಾಲಿ’ (Molly) ಅಥವಾ ‘ಎಕ್ಸ್ಟಸಿ’ (Ecstasy) ಎಂದೂ ಕರೆಯಲಾಗುತ್ತದೆ. ಇದು ನಿಷೇಧಿತ ಮಾದಕ ವಸ್ತುವಾಗಿದೆ.

ಪ್ರಮುಖ ಸುದ್ದಿ :-   'ಬಸವ ಮಂಟಪ' ಕೃತಿ ವಿವಾದ; ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement