ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್: ವರದಿ

ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಪಿಟಿಐ ಮುಖ್ಯಸ್ಥರ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಜಿಯೋ ನ್ಯೂಸ್‌ ಪ್ರಕಾರ, ಎಫ್ಐಆರ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 189 (ಸಾರ್ವಜನಿಕ ಸೇವಕನಿಗೆ ಹಲ್ಲೆ ಬೆದರಿಕೆ) ಮತ್ತು 188 ಸೇರಿದಂತೆ ಪಾಕಿಸ್ತಾನ ದಂಡ ಸಂಹಿತೆಯ (PPC) ನಾಲ್ಕು ವಿಭಾಗಗಳನ್ನು ಒಳಗೊಂಡಿದೆ.
ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದ್ದು, ಆಗಸ್ಟ್ 20 ರಂದು ರಾಜಧಾನಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಅವರು “ಒಂದು ಗೆರೆಯನ್ನು ದಾಟಿರಬಹುದು” ಎಂದು ಅವರು ಅರಿತುಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್ ಉಲ್ಲೇಖಿಸಿ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಕಳೆದ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ತಾವು ಹೇಳಿದ್ದನ್ನು ಸಂಪೂರ್ಣವಾಗಿ ಅನುಸರಿಸುವುದಾಗಿ ಅವರು ಹೇಳಿದರು ಮತ್ತು ಈ ನಿಟ್ಟಿನಲ್ಲಿ ನ್ಯಾಯಾಲಯವನ್ನು ತೃಪ್ತಿಪಡಿಸಲು ಮುಂದಿನ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದು ಹೇಳಿದರು.”ಕೆಂಪು ಗೆರೆ” ದಾಟಿದೆ ಎಂದು ನ್ಯಾಯಾಧೀಶರು ಭಾವಿಸಿದರೆ “ಕ್ಷಮೆ ಕೇಳಲು ಸಿದ್ಧರಿರುವುದಾಗಿ ಪದಚ್ಯುತ ಪ್ರಧಾನಿ ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

.

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement