ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಹಿಂದೆ ನಿಗದಿಯಾಗಿದ್ದ ಪ್ರಕಾರ, ಆಗಸ್ಟ್ 11ರಿಂದಲೇ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಅದು ಆಗಸ್ಟ್ 31ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ. ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಯಶಸ್ವಿಯಾಗಿವೆ. ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಅದು ಕೂಡ ಶೀಘ್ರವೇ ಮುಗಿಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ