ಪಂಜಾಬ್‌ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ: ಟಿಕೆಟ್ ನಿರಾಕರಣೆ ನಂತರ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ ಸಿಎಂ ಚನ್ನಿ ಸಹೋದರ..!

ಚಂಡೀಗಢ: ವಿಧಾನಸಭೆ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದ್ದು, ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಕಿರಿಯ ಸಹೋದರ ಮನೋಹರ್ ಸಿಂಗ್ ಚನ್ನಿ ಅವರು ಬಸ್ಸಿ ಪಠಾನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಮತ್ತು ಕ್ಷೇತ್ರದಲ್ಲಿ ತನ್ನ ಹಾಲಿ ಶಾಸಕ ಗುರುಪ್ರೀತ್ ಸಿಂಗ್ ಅವರನ್ನು ಕಣಕ್ಕಿಳಿಸಿದ ನಂತರ ಸಿಂಗ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸಹೋದರ ಮನೋಹರ್ ಸಿಂಗ್ ಅವರಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನಿರಾಕರಿಸಿ ಹಾಲಿ ಶಾಸಕರಿಗೇ ಟಿಕೆಟ್‌ ನೀಡಿದ ನಂತರ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಸಹೋದರ ಮನೋಹರ್ ಸಿಂಗ್‍ಗೆ ಟಿಕೆಟ್ ನಿರಾಕರಣೆ ಮಾಡಿದೆ. ಖರಾರ್ ಸಿವಿಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಚನ್ನಿ ಸಹೋದರ ಮನೋಹರ್ ಸಿಂಗ್ ಬಸ್ಸಿ ಪಠಾನಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯನ್ನು ಹೊಂದಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ.
ಸಿಂಗ್ ಕಳೆದ ವರ್ಷ ಆಗಸ್ಟ್‌ನಲ್ಲಿ ಖರಾರ್ ಸಿವಿಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಹಲವಾರು ಕೌನ್ಸಿಲರ್‌ಗಳು, ಗ್ರಾಮಗಳ ಸರಪಂಚ್‌ಗಳು ಮತ್ತು ಪಂಚರನ್ನು ಭೇಟಿ ಮಾಡಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡ ನಂತರ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಸಿಧು ಚನ್ನಿ ಸಹೋದರನಿಗೆ ಪಕ್ಷದ ಅಭ್ಯರ್ಥಿಯನ್ನು ನೀಡುವ ಪರವಾಗಿಲ್ಲ ಮತ್ತು ಸಿಂಗ್ ಟಿಕೆಟ್‌ಗಾಗಿ ಸಾರ್ವಜನಿಕವಾಗಿ ಹಕ್ಕು ಸಾಧಿಸಿದ್ದರೂ ಗುರುಪ್ರೀತ್ ಪರವಾಗಿ ಸಿಧು ರ್ಯಾಲಿ ನಡೆಸಿದ್ದರು ಎಂದು ವರದಿಗಳು ತಿಳಿಸಿವೆ.
ಪಕ್ಷದ ನಿರ್ಧಾರವನ್ನು ಕ್ಷೇತ್ರದ ಜನತೆಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದ ಸಿಂಗ್, ಹಾಲಿ ಶಾಸಕರು ಅಸಮರ್ಥರು ಮತ್ತು ನಿಷ್ಪರಿಣಾಮಕಾರಿ ಎಂದು ಆರೋಪಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ‘ಒಂದು ಕುಟುಂಬ-ಒಂದು ಟಿಕೆಟ್’ ಸೂತ್ರದ ಮೇಲೆ ಟಿಕೆಟ್‌ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಆದರೆ ಪಕ್ಷವು ಜಲಂಧರ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಸಿಂಗ್ ಚೌಧರಿ ಅವರನ್ನು ಫಿಲ್ಲೌರ್ ಕ್ಷೇತ್ರದಿಂದ ಕಣಕ್ಕಿಳಿಸಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಫತೇಘರ್ ಸಾಹಿಬ್ ಸಂಸದ ಅಮರ್ ಸಿಂಗ್ ಅವರ ಪುತ್ರ ಕಮಿಲ್ ಅಮರ್ ಸಿಂಗ್ ಅವರಿಗೆ ರಾಯ್ಕೋಟ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ತನ್ನ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಒಟ್ಟು 79 ಶಾಸಕರ ಪೈಕಿ 61 ಶಾಸಕರಿಗೆ ಪಕ್ಷದ ಟಿಕೆಟ್ ನೀಡಿದೆ. ಈ ಹಿನ್ನೆಲೆಯಿಂದಾಗಿ ಪಕ್ಷದ ಶಾಸಕರುಗಳು ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿದುಕೊಂಡಿದ್ದರೂ ಟಿಕೆಟ್ ಆಂಕಾಕ್ಷಿಗಳು ಮಾತ್ರ ಅಸಮಾಧಾನವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಗುರುಪ್ರೀತ್ ಸಿಂಗ್ ಜಿಪಿ ಅವರನ್ನೇ ಕಣಕ್ಕೆ ಇಳಿಸಿದೆ. ಇದರಿಂದಾಗಿ ಅಸಮಾಧಾನಗೊಂಡಿರುವ ಮನೋಹರ್ ಸಿಂಗ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ತನ್ನ 86 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶನಿವಾರ ಪಕ್ಷದ ಶಾಸಕ ಗುರುಪ್ರೀತ್ ಸಿಂಗ್ ಜಿಪಿಗೆ ಬಸ್ಸಿ ಪಠಾನಾ (ಎಸ್‌ಸಿ) ಸ್ಥಾನದಿಂದ ಟಿಕೆಟ್ ನೀಡಿದೆ.
ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement