ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷಗೆ ಜೈಲು ಶಿಕ್ಷೆ: ಬೆಂಬಲಿಗರಿಂದ ನಡೆದ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 72ಕ್ಕೆ ಏರಿಕೆ..!

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಕೋರ್ಟ್‌ ಜೈಲಿಗೆ ಕಳುಹಿಸಿದ ಬೆನ್ನಲ್ಲೇ ದೇಶದಲ್ಲಿ ಗಲಭೆ ಶುರುವಾಗಿದೆ. ಹಿಂಸಾಚಾರದಲ್ಲಿ 70ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 1234 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರಿಗೆ 15 ತಿಂಗಳು ಜೈಲು ಶಿಕ್ಷೆಯಾಗಿದೆ. ಅವರನ್ನು ಜೈಲಿಗೆ ಕಳುಹಿಸಿದ ನಂತರ ಅವರ ಬೆಂಬಲಿಗರಿಂದ ದೇಶದಲ್ಲಿ ಹಿಂಸಾಚಾರ, ಗಲಭೆ ಹೆಚ್ಚಾಗಿದೆ.
ಗೌಟೆಂಗ್ ಹಾಗೂ ಕ್ವಾಜುಲು-ನಟಾಲ್ ಪ್ರಾಂತ್ಯಗಳಲ್ಲಿ ಕಳೆದ ಐದು ದಿನಗಳಿಂದ ಗಲಭೆ, ಅಂಗಡಿಗಳ ಲೂಟಿ ನಡೆಯುತ್ತಿದೆ, ಮಂಗಳವಾರವೂ ಈ ಪ್ರಾಂತ್ಯದಲ್ಲಿ ಅಂಗಡಿಗಳ ಲೂಟಿ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಧ್ಯಕ್ಷ ಸಿರಿಲ್ ರಾಮ್ಪೊಸಾ ಅವರು ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ.
ಜೊಹಾನ್ಸ್‌ಬರ್ಗ್‌ ಹೊರವಲಯದ ಸೊವೆಟೊದಲ್ಲಿ ಗಲಭೆಕೋರರು ಲೂಟಿ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಹಲವು ಮಂದಿ ಮೃತಪಟ್ಟಿದ್ದಾರೆ.
ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಡೆದ ಗಲಭೆ, ಹಿಂಸಾಚಾರದಲ್ಲಿ 27 ಜನರು ಮೃತಪಟ್ಟಿದ್ದಾರೆ. ಗೌಟೆಂಗ್ ಪ್ರಾಂತ್ಯದಲ್ಲಿ 45 ಮಂದಿ ಮೃತಪಟ್ಟಿದ್ದಾರೆ. ಗಲಭೆ, ಕಾಲ್ತುಳಿತದಲ್ಲಿ ಸತ್ತವರ ಸಂಖ್ಯೆ 72ಕ್ಕೆ ಏರಿದೆ ಎಂದು ವರದಿಗಳು ತಿಳಿಸಿವೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement