ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ.
ಹೈಕಮಾಂಡ್ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್ 29) ಉಪಾಹಾರಕ್ಕಾಗಿ (ಬ್ರೇಕ್ಫಾಸ್ಟ್ಗೆ) ಡಿ.ಕೆ. ಶಿವಕುಮಾರ ಅವರನ್ನು ಆಹ್ವಾನಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ನ. 29ರ ಬೆಳಗ್ಗೆ ತಾವು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರನ್ನು ಭೇಟಿಯಾಗುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಒಪ್ಪಿದ್ದಾರೆ ಎಂದು ಈ ಮಾಧ್ಯಮಗಳ ವರದಿಗಳು ಹೇಳಿವೆ.
ಪರಸ್ಪರ ಭೇಟಿಯಾಗಿ ಚರ್ಚಿಸಿ ತೀರ್ಮಾನಕ್ಕೆ ಬನ್ನಿ ಎಂದು ಹೈಕಮಾಂಡ್ ನಾಯಕರೇ ಸೂಚಿಸಿದ್ದು ಆ ಹಿನ್ನೆಲೆಯಲ್ಲಿ ನವೆಂಬರ್ 29ರಂದು ಬೆಳಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆಯಲಾಗಿದೆ ಎಂದು ವರದಿಗಳು ತಿಳಸಿವೆ.
ನವೆಂಬರ್ 28ರಂದು ಸಂಜೆ ಶಿವಕುಮಾರ ಅವರು ದೆಹಲಿಗೆ ಪ್ರಯಾಣ ಬೆಳೆಸಬೇಕಿತ್ತು, ಆದರೆ, ಅವರು ಕೊನೆಗಳಿಗೆಯಲ್ಲಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದರು. ಅದಾಗಿ, ಸುಮಾರು 1 ಗಂಟೆ ಕಳೆಯುಷ್ಟರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿ ಬ್ರೇಕ್ ಫಾಸ್ ಮೀಟಿಂಗ್ ಏರ್ಪಾಟಾಗಿರುವ ಸುದ್ದಿ ಹೊರಬಿದ್ದಿದೆ.


ನಿಮ್ಮ ಕಾಮೆಂಟ್ ಬರೆಯಿರಿ