ಪ್ರಮೋದ ಮುತಾಲಿಕಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರಿಗೆ ಜುಲೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಈ ತಾಲೂಕುಗಳಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ಪ್ರವೇಶ ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬೆಳ್ಳಾರೆಯ ಪ್ರವೀಣ ನೆಟ್ಟಾರು ಅವರ ಮನೆಗೆ ಹಾಗೂ ಇತರ ಕಡೆಗಳಿಗೆ ಪ್ರಮೋದ ಮುತಾಲಿಕ್ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಈ ಆದೇಶ ಮಾಡಲಾಗಿದೆ ಎನ್ನಲಾಗಿದೆ.
ಪ್ರವೀಣ ಹತ್ಯೆಯ ನಂತರ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದ್ದು, ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement