ಐಪಿಎಲ್ 2024 : ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್‌ ಆದ ಕೋಲ್ಕತ್ತಾ ನೈಟ್ ರೈಡರ್ಸ್

ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ಮೇ 26 ರಂದು ನಡೆದ ಐಪಿಎಲ್ 2024 ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಎಂಟು ವಿಕೆಟ್‌ಗಳ ಜಯ ಸಾಧಿಸಿತು. ಹಾಗೂ ಮೂರನೇ ಬಾರಿಗೆ ಟ್ರೋಫಿ ತನ್ನದಾಗಿಸಿಕೊಂಡಿತು.
ಫೈನಲ್‌ ಏಕಪಕ್ಷೀಯ ಪಂದ್ಯವಾಗಿ ಪರಿಣಮಿಸಿತು. ಪ್ರತಿಯೊಂದು ವಿಭಾಗದಲ್ಲೂ ಕೆಕೆಆರ್‌ ತಂಡವು ಪ್ರಾಬಲ್ಯ ಸಾಧಿಸಿತು. ವೇಗಿಗಳಾದ ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ ಮತ್ತು ಆಂಡ್ರೆ ರಸೆಲ್ ಅವರು ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 113 ರನ್‌ಗಳಿಗೆ ಸೀಮಿತಿಗೊಳಿಸಿದರು.ಇದು ಐಪಿಎಲ್ ಫೈನಲ್‌ಗಳ ಇತಿಹಾಸದಲ್ಲಿ ಅತ್ಯಂತ ಕಡಿಮೆ ಮೊತ್ತವಾಗಿದೆ.

ಕಡಿಮೆ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡವು ಆರಂಭಿಕ ಆಟಗಾರ ಸುನಿಲ್ ನಾರಾಯಣ ಅವರನ್ನು ಬೇಗನೆ ಕಳೆದುಕೊಂಡಿತು. ಆದರೆ ವೆಂಕಟೇಶ ಅಯ್ಯರ್ ಮತ್ತು ರಹಮಾನುಲ್ಲಾ ಗುರ್ಬಾಜ್ ಎರಡನೇ ವಿಕೆಟ್‌ಗೆ 91 ರನ್‌ಗಳನ್ನು ಸೇರಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು. ಒಂಬತ್ತು ವರ್ಷಗಳ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.
ವೆಂಕಟೇಶ ಅಯ್ಯರ್ ಕೇವಲ 26 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 52* ರನ್ ಗಳಿಸಿದರು. ಅವರು 11ನೇ ಓವರ್‌ನಲ್ಲಿ ಗೆಲುವಿನ ರನ್ ಗಳಿಸಿದರು. ಸೋತ ತಂಡದ ಪರ ಪ್ಯಾಟ್ ಕಮಿನ್ಸ್ ಮತ್ತು ಶಹಬಾಜ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

ನಿರ್ಣಾಯಕ ಟಾಸ್ ಗೆದ್ದ ನಂತರ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವುದನ್ನು ಆಯ್ಕೆ ಮಾಡಿಕೊಂಡರು. ಆದರೆ ತಂಡದ ಬ್ಯಾಂಟಿಂಗ್‌ ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ.
8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ನಾಯಕ ಕಮ್ಮಿನ್ಸ್ 19 ಎಸೆತಗಳಲ್ಲಿ 24 ರನ್ ಗಳಿಸಿದ್ದೇ ತಂಡದ ಆಟಗಾರನ ಗರಿಷ್ಠ ಸ್ಕೋರ್ ಆಗಿತ್ತು. ಏಡೆನ್ ಮಾರ್ಕ್ರಾಮ್ 23 ಎಸೆತಗಳಲ್ಲಿ 20 ರನ್ ಸೇರಿಸಿದ್ದು ಬಿಟ್ಟರೆ ಉಳಿದವರು ಬ್ಯಾಂಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲರಾದರು. ಕೆಕೆಆರ್‌ ತಂಡದ ರಸೆಲ್ 19ಕ್ಕೆ ಮೂರು ವಿಕೆಟ್ ಕಬಳಿಸಿ ಅತ್ಯುತ್ತಮ ಬೌಲರ್ ಆಗಿ ಹೊರಹೊಮ್ಮಿದರೆ, ಸ್ಟಾರ್ಕ್ ಮತ್ತು ಹರ್ಷಿತ್ ತಲಾ ಎರಡು ವಿಕೆಟ್ ಪಡೆದರು.

0 / 5. 0

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement