ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜನತಾದಳ (ಜಾತ್ಯತೀತ) ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ ಎಂದು ಅವರ ಕಚೇರಿ ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಎಚ್.ಡಿ.ದೇವೇಗೌಡ (88) ಅವರು ಲಕ್ಷಣರಹಿತರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು.
ದೇವೇಗೌಡ ಅವರು ಭಾರತದ ಹನ್ನೆರಡನೇ ಪ್ರಧಾನ ಮಂತ್ರಿಯಾಗಿದ್ದರು ಮತ್ತು ಜೂನ್ 1996 ರಿಂದ ಏಪ್ರಿಲ್ 1997 ರವರೆಗೆ ಸೇವೆ ಸಲ್ಲಿಸಿದರು. ಅವರು 1994 ರಿಂದ 1996 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.
ದೇವೇಗೌಡರು ಪ್ರಸ್ತುತ ಕರ್ನಾಟಕದ ಹಾಸನ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯಸಭೆಯ ಸಂಸದರಾಗಿದ್ದಾರೆ. ಅವರು ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement