
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರವಾಸೀ ತಾಣ ಯಾಣ ಸಮೀಪ ಹಸೆಮನೆ ತಿರುವಿನ ಬಳಿ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಶಿರಸಿಯಿಂದ ಯಾಣದತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಯ ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸದ ಮತ್ತಿಘಟ್ಟಾ ದಾಟಿದ ನಂತರ ತಿರುವು ಪ್ರದೇಶದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಬಸ್‌ನಲ್ಲಿ ಸುಮಾರು 50 ಮಂದಿ ವಿದ್ಯಾರ್ಥಿಗಳು ಹಾಗೂ 3 ಮಂದಿ ಶಿಕ್ಷಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಮತ್ತು ಸಹಪ್ರಯಾಣಿಕರು ಗಾಯಾಳುಗಳನ್ನು ಹೊರತೆಗೆದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ, ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ಅವರು ಯಾಣಕ್ಕೆ ಹೋಗುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂಧ ಅಪಘಾತ ತಪ್ಪಿದೆ ಎಂದು ಹೇಳಲಾಗಿದೆ.
ಡಿಸೆಂಬರ್ 28ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಈ ವಿದ್ಯಾರ್ಥಿಗಳ ತಂಡ, ಮಂಗಳವಾರ ಬೆಳಿಗ್ಗೆ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ದೇವಿಯ ದರ್ಶನ ಪಡೆದ ಬಳಿಕ ಯಾಣದ ಗುಹೆಗಳತ್ತ ತೆರಳುತ್ತಿತ್ತು. ಯಾಣ ಸಮೀಪದ ತಿರುವು ರಸ್ತೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.


ನಿಮ್ಮ ಕಾಮೆಂಟ್ ಬರೆಯಿರಿ