
ತುಮಕೂರು: ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರನ್ನು ವಾಪಸ್ಸು ಪಡೆದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ದೂರು ಹಿಂಪಡೆದಿರಬಹುದು. ಆದರೆ ಟಿವಿಯಲ್ಲಿ ಪ್ರಸಾರ ಆಗಿದ್ದನ್ನು ಹಿಂಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದಿನೇಶ ಕಲ್ಹಳ್ಳಿ ಈಗ ದೂರು ಹಿಂಪಡೆದಿರಬಹುದು. ಅದು ಯಾಕೆಂದು ನನಗೇನು ಗೊತ್ತು? ಅದರೆ ಅವರು ದೂರು ಹಿಂಪಡೆದಾಕ್ಷಣ ಈಗಾಗಲೇ ಮಾಧ್ಯಮದಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ ಎಂದು ಕೇಳಿದರು.



ನಿಮ್ಮ ಕಾಮೆಂಟ್ ಬರೆಯಿರಿ