ಶೀಘ್ರವೇ ಬ್ಯಾಂಕ್ ನೌಕರರ ವೇತನ ಶೇ.17ರಷ್ಟು ಹೆಚ್ಚಳ, ವಾರದಲ್ಲಿ 5 ದಿನ ಕೆಲಸಕ್ಕೆ ಒಪ್ಪಿಗೆ ಸಾಧ್ಯತೆ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರದ ಮೋದಿ ಸರ್ಕಾರ ಒಪ್ಪಿಗೆ ನೀಡಿದ ಒಂದು ದಿನದ ನಂತರ, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು (Indian Banks’ Association and bank employee unions) ಶುಕ್ರವಾರ ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ. ಈ ಕ್ರಮದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕವಾಗಿ ಸುಮಾರು 8,284 ಕೋಟಿ ರೂ.ಗಳಷ್ಟು ಹೆಚ್ಚುವರಿ ಹೊರೆ ಬೀಳಲಿದೆ.
8 ಲಕ್ಷ ಬ್ಯಾಂಕ್ ಉದ್ಯೋಗಿಗಳು ವೇತನ ಹೆಚ್ಚಳದಿಂದ ಪ್ರಯೋಜನ ಪಡೆಯಲಿದ್ದಾರೆ, ಇದು ನವೆಂಬರ್ 2022 ರಿಂದ ಜಾರಿಗೆ ಬರಲಿದೆ. . ಅಲ್ಲದೇ ಸರ್ಕಾರಿ ಅಧಿಸೂಚನೆಗೆ ಬಾಕಿಯಿರುವ ಎಲ್ಲಾ ಶನಿವಾರಗಳನ್ನು ರಜೆಯೆಂದು ಗುರುತಿಸುವ ಜಂಟಿ ಟಿಪ್ಪಣಿಯನ್ನು ಒಪ್ಪಿಕೊಳ್ಳಲಾಗಿದೆ. ಪರಿಷ್ಕೃತ ಕೆಲಸದ ಸಮಯವು ಸರ್ಕಾರದ ಅಧಿಸೂಚನೆಯ ನಂತರ ಜಾರಿಗೆ ಬರಲಿದೆ ಎಂದು ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ತಿಳಿಸಿದೆ. ಪರಿಷ್ಕೃತ ಕೆಲಸದ ಸಮಯವು ಸರ್ಕಾರದ ಅಧಿಸೂಚನೆಯ ನಂತರ ಜಾರಿಗೆ ಬರಲಿದೆ ಎಂದು ಅದು ಹೇಳಿದೆ.

ಪ್ರಮುಖ ಸುದ್ದಿ :-   "ನೀವು ಮತವನ್ನೂ ಹಾಕಿಲ್ಲ...": ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

“8088 ಅಂಕಗಳಿಗೆ ಅನುಗುಣವಾದ ತುಟ್ಟಿಭತ್ಯೆ ಮತ್ತು ಹೆಚ್ಚುವರಿ ಹೊರೆಯನ್ನು ವಿಲೀನಗೊಳಿಸಿದ ನಂತರ ಹೊಸ ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗಿದೆ” ಎಂದು ಅದು ಹೇಳಿದೆ.
ಹೊಸ ವೇತನ ಪರಿಷ್ಕರಣೆಯಡಿ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ನೀಡದೆ ತಿಂಗಳಿಗೆ ಒಂದು ದಿನ ಅನಾರೋಗ್ಯ ರಜೆ ತೆಗೆದುಕೊಳ್ಳಲು ಅನುಮತಿಸಲಾಗಿದೆ. ಸೇವೆಯಲ್ಲಿದ್ದಾಗ ನೌಕರನ ನಿವೃತ್ತಿಯ ಸಮಯದಲ್ಲಿ/ ಮರಣದ ನಂತರ ಸಂಚಿತ ಸವಲತ್ತು ರಜೆಯನ್ನು 255 ದಿನಗಳವರೆಗೆ ಎನ್‌ಕ್ಯಾಶ್ ಮಾಡಬಹುದು ಎಂದು ಅದು ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಐಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ ಮೆಹ್ತಾ ಅವರು, ಯುಎಫ್ ಬಿಯು ಮತ್ತಿತರು ಬ್ಯಾಂಕ್ ನೌಕರರು ಸಂಘಗಳು ವೇತನ ಪರಿಷ್ಕರಣೆ ಕುರಿತ 9ನೇ ಜಂಟಿ ಟಿಪ್ಪಣಿ ಮತ್ತು 12 ದ್ವಿಪಕ್ಷೀಯ ಇತ್ಯರ್ಥ ಮತ್ತು ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರ ಪರಿಷ್ಕೃತ ವೇತನಕ್ಕೆ ಸಹಿ ಹಾಕಿರುವುದರಿಂದ ಇದು ಬ್ಯಾಂಕಿಂಗ್ ಉದ್ಯಮಕ್ಕೆ ಮಹತ್ವದ ಮೈಲಿಗಲ್ಲು ಆಗಲಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement