ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ.
ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾರವಾರ : ಹವಾಮಾನ ಇಲಾಖೆ ಶುಕ್ರವಾರ ರೆಡ್‌ ಲರ್ಟ್‌ ನೀಡಿರುವುದರಿಂದ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಂದು ರಜೆ ಘೋಷಿಸಲಾಗಿದೆ.
ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ಹಾಗೂ ಶನಿವಾರ (ಜುಲೈ 19 ಮತ್ತು 20) ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಖಾನಾಪುರ ತಾಲೂಕಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಇದರಿಂದ ನದಿ-ನಾಲೆಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಮಳೆಯಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಹರಸಾಹಸ ಪಡುವಂತಾಗಿದೆ. ಈ ಹಿನ್ನಲೆಯಲ್ಲಿ ಸುರಿಯುತ್ತಿರುವ ಮಳೆ ಪರಿಸ್ಥಿತಿ ಪರಿಗಣಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರಜೆ ಘೋಷಣೆ ಮಾಡಿದ್ದಾರೆ.
ಖಾನಾಪುರ ತಾಲೂಕಿನ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳಿಗೆ ತೊಂದರೆ ಆಗುತ್ತಿರುವುದನ್ನು ಗಮನಿಸಿ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ಪ್ರಕಾಶ ಗಾಯಕ್ವಾಡ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement