ಧಾರವಾಡ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಧಾರವಾಡದ ಎಸ್ ಡಿಎಂ ಅಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಚೆನ್ನವೀರ ಕಣವಿ ಅವರ ಆರೋಗ್ಯದ ಬಗ್ಗೆ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಚೆನ್ನವೀರ ಕಣವಿ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ. ಆಮ್ಲಜನಕ ಅಗತ್ಯತೆಯಲ್ಲಿಯೂ ಇಳಿಕೆ ಕಾಣಿಸುತ್ತಿದೆ ಎಂದು ಮಾಹಿತಿ ನೀಡಿದೆ.
ನಾಡೋಜ ಚೆನ್ನವೀರ ಕಣವಿ ಕಳೆದ ೧೦ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು, ಭಾನುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ


ನಿಮ್ಮ ಕಾಮೆಂಟ್ ಬರೆಯಿರಿ