ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು? : ಮಲ್ಲಿಕಾರ್ಜುನ ಖರ್ಗೆ ಕೊಟ್ಟ ಉತ್ತರ ಹೀಗಿದೆ….

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಶನಿವಾರ ಮಾತನಾಡಿದ್ದಾರೆ.
ಇಂಡಿಯಾ ಟುಡೇ ಕರ್ನಾಟಕ ದುಂಡುಮೇಜು- 2023 (ndia Today Karnataka Roundtable 2023) ರಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆಯ ನಂತರ, ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಅಥವಾ ಆ ವ್ಯಕ್ತಿಯನ್ನು ಬೆಂಬಲಿಸುತ್ತಾರೆ ಎಂಬುದನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
ನಾವು ಯಾವಾಗಲೂ ಒಂದು ವಿಧಾನವನ್ನು ಅನುಸರಿಸುತ್ತೇವೆ. ಶಾಸಕರ ಆಯ್ಕೆ ಅಥವಾ ಬೆಂಬಲವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಶಾಸಕರ ಸಂಖ್ಯೆ ಮತ್ತು ಬೆಂಬಲದ ಆಧಾರದ ಮೇಲೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ನಿರ್ಧಾರ ಅಂತಿಮ” ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ನೀವು (ಖರ್ಗೆ) ಈಗ ಹೈಕಮಾಂಡ್ ಆಗಿದ್ದೀರಾ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ವ್ಯಕ್ತಿಯಾಗಿರಲು ಸಾಧ್ಯವಿಲ್ಲ . ಹೈಕಮಾಂಡ್ ಎಂದರೆ ಸಾಮೂಹಿಕ ನಾಯಕತ್ವ. ನಮ್ಮಲ್ಲಿ ಕಾರ್ಯಕಾರಿ ಸಮಿತಿ ಇದೆ, ಸಂಸದೀಯ ಮಂಡಳಿ ಇದೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ನಮ್ಮ ಹಿರಿಯ ನಾಯಕರು ಇದ್ದಾರೆ, ನಾವು ಸಾಮೂಹಿಕವಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಪಕ್ಷದ ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಊಹಾಪೋಹಗಳ ಬಗ್ಗೆ ಮಾತನಾಡಿದ ಖರ್ಗೆ, “ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವ ಸಾಮರ್ಥ್ಯದ ಹುದ್ದೆಯಲ್ಲಿರುವಾಗ ನಾನು ಮುಖ್ಯಮಂತ್ರಿಯಾಗಬೇಕು ಎಂದು ಏಕೆ ಹೇಳುತ್ತೇನೆ, ನಾನು ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಯಲ್ಲ. ನಾನು ಮುಖ್ಯಮಂತ್ರಿಗಳನ್ನು ನೇಮಿಸುತ್ತೇನೆ ಎಂದು ಅವರು ಹೇಳಿದರು.
ಒಂದು ರಾಜ್ಯದ ಮುಖ್ಯಮಂತ್ರಿಯಾಗುವುದು ಉತ್ತಮವೇ ಅಥವಾ ಹಲವಾರು ರಾಜ್ಯಗಳಿಗೆ ಮುಖ್ಯಮಂತ್ರಿಗಳನ್ನು ನೇಮಿಸುವ ಅಧಿಕಾರವನ್ನು ಹೊಂದಿರುವುದು ಉತ್ತಮವೇ ಎಂದು ಅವರು ಪ್ರಶ್ನಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವಿದೆ. ನಮ್ಮ ಶ್ರಮದಿಂದಾಗಿ ನಮಗೆ ವಿಶ್ವಾಸವಿದೆ, ಈ ಬಾರಿ ನಮ್ಮ ಪಕ್ಷ ಒಂದಾಗಿ ಕೆಲಸ ಮಾಡುತ್ತಿದೆ. ಎರಡನೆಯದಾಗಿ ಈಗಿನ ಸರ್ಕಾರ ಇಂತಹ ಭ್ರಷ್ಟ ಸರ್ಕಾರವಾಗಿದ್ದು, ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಸಾರ್ವಜನಿಕರು ಬಯಸಿದ್ದಾರೆ ಎಂದರು.
ಕರ್ನಾಟಕದಲ್ಲಿ ಎಲ್ಲಾ 224 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಮತಗಳ ಎಣಿಕೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement