ನೇಕಾರರು ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

ಉಡುಪಿ: ಈ ವರ್ಷದಿಂದ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಸೋಮವಾರ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೀನುಗಾರಿಕೆ ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಮೀನುಗಾರರ 8 ಬಂದರುಗಳಲ್ಲಿ ಹೂಳು ತೆಗೆಯುವ ಕೆಲಸವನ್ನು ಮಾಡಲಾಗುವುದು. ಪ್ರತಿ ಗ್ರಾಮಪಂಚಾಯತಿ ಕೆರೆಗಳಲ್ಲಿ ಮೀನುಗಾರರಿಗೆ ಕೆರೆಗಳನ್ನು ಮೀಸಲಿಟ್ಟು, ಮೀನಿನ ಕೃಷಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

ಮಹಿಳಾ ಸಬಲೀಕರಣ
ಸ್ತ್ರೀಶಕ್ತಿ ಸಂಘಗಳ ಸಾಲಗಳ ಮರುಪಾವತಿ ಶೇ.95 ರಷ್ಟಿದೆ. ಇದು ಮಹಿಳೆಯರ ಪರಿಶ್ರಮ ಹಾಗೂ ಪ್ರಮಾಣಿಕತೆಯನ್ನು ತೋರಿಸುತ್ತದೆ. ರಾಜ್ಯದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಆಂಕರ್ ಬ್ಯಾಂಕ್ ಜೋಡಿಸಿ ಸ್ತ್ರೀ ಶಕ್ತಿ ಸಂಘಗಳಿಗೆ 1.5 ಲಕ್ಷ ರೂ.ಗಳಷ್ಟು ಸಾಲ ಸೌಲಭ್ಯ ನೀಡಲಾಗುವುದು ಎಂದರು.
ರಾಜ್ಯದಲ್ಲಿ 100 ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುವುದು. ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 1000 ಹಾಸ್ಟೆಲ್‍ಗಳ ಕ್ಲಸ್ಟರ್ ನಿರ್ಮಿಸಲಾಗುವುದು. ಮೊಗವೀರ ಸಮುದಾಯದ ಮಕ್ಕಳಿಗೆ ವಸತಿ ನಿಲಯ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪೂರೈಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಪ್ರಮುಖ ಸುದ್ದಿ :-   ರಾಣೇಬೆನ್ನೂರು: ತಿರುಪತಿಗೆ ಹೊರಟಿದ್ದ ಕಾರು ಅಪಘಾತ: ನಾಲ್ವರು ಸಾವು, 6 ಮಂದಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement