ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ಸಿಎಂ, ಡಿಸಿಎಂಗೆ ಬಾಂಬ್​ ಸ್ಫೋಟಿಸುವ ಬೆದರಿಕೆಯ ಇ-ಮೇಲ್

ಬೆಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ ಬೆದರಿಕೆ ಇ-ಮೇಲ್‌ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಬರೀ ಟ್ರೈಲರ್? ನೀವು ನಮಗೆ 2.5 ಮಿಲಿಯನ್ ಡಾಲರ್ ನೀಡದಿದ್ದರೆ, ನಾವು ಕರ್ನಾಟಕದಾದ್ಯಂತ ಬಸ್ಸುಗಳು, ರೈಲುಗಳು, ದೇವಸ್ಥಾನಗಳು, ಹೋಟೆಲ್‌ ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಇ-ಮೇಲ್ ನಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

“ನಾವು ನಿಮಗೆ ಇನ್ನೊಂದು ಟ್ರೈಲರ್ ಅನ್ನು ತೋರಿಸಲು ಬಯಸುತ್ತೇವೆ. ನಾವು ಮುಂದೆ ಅಂಬಾರಿ ಉತ್ಸವ ಬಸ್‌ ಸ್ಫೋಟಿಸುತ್ತೇವೆ. ಅಂಬಾರಿ ಉತ್ಸವ ಬಸ್ ಸ್ಫೋಟದ ನಂತರ, ನಾವು ನಮ್ಮ ಬೇಡಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೇಳುತ್ತೇವೆ. ನಿಮಗೆ ಕಳುಹಿಸಲಾದ ಮೇಲ್‌ನ ಸ್ಕ್ರೀನ್‌ಶಾಟ್‌ಗಳನ್ನು ಅಪ್‌ಲೋಡ್ ಮಾಡುತ್ತೇವೆ. ಸಾಮಾಜಿಕ ಮಾಧ್ಯಮದಲ್ಲಿ ನಾವು ಮುಂದಿನ ಸ್ಫೋಟದ ಬಗ್ಗೆ ಮಾಹಿತಿಯನ್ನು ಟ್ವೀಟ್ ಮಾಡುತ್ತೇವೆ ಎಂದು ಇ ಮೇಲ್ ನಲ್ಲಿ ಹೇಳಲಾಗಿದೆ.
ಬೆಂಗಳೂರಿನ ಹೆಚ್​ಎಎಲ್​​ನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1ರಂದು ಬಾಂಬ್ ಸ್ಫೋಟಿಸಲಾಗಿದ್ದು ಬಾಂಬ್ ಇಟ್ಟ ಉಗ್ರನ ಸುಳಿವು ಸಿಕ್ಕಿಲ್ಲ. ಎಫ್‌ಎಸ್‌ಎಲ್ ತಂಡ, ಸಿಸಿಬಿ ಪೊಲೀಸರು, ಎನ್‌ಐಎ (NIA) ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement