ನಾಳೆ ಮಾಜಿ ಶಾಸಕ ಯು.ಬಿ ಬಣಕಾರ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ ಅವರು ಸೋಮವಾರ ನವೆಂಬರ್‌ 21ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ ಸನಿಹ ಬರುತ್ತಿದ್ದಂತೆಯೇ ಬಿಜೆಪಿ ತೊರೆದ ಶಾಕ್ ನೀಡಿದ್ದ ಯು ಬಿ.ಬಣಕಾರ ಅವರು ಸೋಮವಾರ ಕಾಂಗ್ರೆಸ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್‌ ಪಕ್ಷವು ಯು,ಬಿ ಬಣಕಾರ ಅವರನ್ನು ಸಚಿವ ಬಿ.ಸಿ ಪಾಟೀಲ ವಿರುದ್ಧ ಹಾವೇರಿ ಜಿಲ್ಲೆಯ ಹಿರೇಕೆರೂರಿನಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ.
ಯು.ಬಿ ಬಣಕಾರ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ , ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement