ನೀತಿ ಆಯೋಗದ ಸಭೆಯಲ್ಲಿ ಮಾತನಾಡುವಾಗ ನನ್ನ ಮೈಕ್‌ ಮ್ಯೂಟ್‌ ಎಂದು ಮಮತಾ ಆರೋಪ ; ಅದು ಸುಳ್ಳು ಎಂದ ಪಿಐಬಿ ಫ್ಯಾಕ್ಟ್‌ ಚೆಕ್‌

ನವದೆಹಲಿ: ಶನಿವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನೀಡಿಲ್ಲ ಹಾಗೂ ತಾನು ಮಾತನಾಡುವಾಗ ಮೈಕ್‌ ಸ್ವಿಚ್‌ ಆಫ್‌ ಮಾಡಲಾಗಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಆರೋಪ ಸುಳ್ಳು ಎಂದು ಪಿಐಬಿ ಫ್ಯಾಕ್ಟ್‌ ಚೆಕ್‌ (PIB Fact Check) ಹೇಳಿದೆ.
ಪಿಐಬಿ ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು ಸಭೆಯಲ್ಲಿ ಏನು ನಡೆಯಿತು ಎಂಬುದನ್ನು ವಿವರಿಸಿದೆ.
ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನ್ನ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ತಪ್ಪು ಹೇಳಿಕೆಯಾಗಿದೆ ಎಂದು ಪಿಐಬಿ ಹೇಳಿದೆ.

ವರ್ಣಮಾಲೆಯ ಪ್ರಕಾರ ಮಮತಾ ಬ್ಯಾನರ್ಜಿ ಅವರಿಗೆ ಮಧ್ಯಾಹ್ನದ ನಂತರ ಮಾತನಾಡಲು ಅವಕಾಶ ನೀಡಲಾಗಿತ್ತು. ಆದರೆ ಪಶ್ಚಿಮ ಬಂಗಳಾದ ಮುಖ್ಯಮಂತ್ರಿ ಕಚೇರಿಯ ಮನವಿಯ ಮೇರೆಗೆ ಅವರಿಗೆ ನಿಗದಿಗಿಂತ ಮುಂಚಿತವಾಗಿ 7ನೆಯವರಾಗಿ ಮಾತನಾಡಲು ತಿಳಿಸಲಾಗಿತ್ತು. ಅವರು ಮಾತನಾಡುವಾಗ ಮಾತನಾಡುವ ಸಮಯ ಮಗಿದಿದೆ ಎಂದು ಗಡಿಯಾರ ತೋರಿಸಿತ್ತು. ಆದರೆ ಯಾವುದೇ ಬೆಲ್‌ ಬಾರಿಸಿಲ್ಲ ಎಂದು ಪಿಐಬಿ ಹೇಳಿದೆ.
ಪಶ್ಚಿಮ ಬಂಗಾಳಕ್ಕೆ ಬರಬೇಕಿದ್ದ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸಿದಾಗ ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಯಿಂದ (NITI Aayog Meeting) ಅರ್ಧದಲ್ಲೇ ಹೊರನಡೆದಿದ್ದರು.

ಪ್ರಮುಖ ಸುದ್ದಿ :-   ಐಐಟಿ-ಬಾಂಬೆಯಲ್ಲಿ 14 ದಿನ ವಾಸವಿದ್ದ ನಕಲಿ 'ಪಿಎಚ್‌ಡಿ ವಿದ್ಯಾರ್ಥಿ'...! ಈತನ ಗುಟ್ಟು ರಟ್ಟು ಮಾಡಿದ ಸೋಫಾ ಮೇಲಿನ ನಿದ್ರೆ...!!

ನನಗಿಂತ ಮೊದಲು ಮಾತನಾಡಿದ ಮುಖ್ಯಮಂತ್ರಿಗಳಿಗೆ 20 ನಿಮಿಷ ಸಮಯಾವಕಾಶ ನೀಡಲಾಗಿತ್ತು. ನನಗೆ ಕೇವಲ ಐದು ನಿಮಿಷ ನೀಡಲಾಯಿತು. ನಾನು ಪಶ್ಚಿಮ ಬಂಗಾಳಕ್ಕೆ ನೆರವು ನಿರಾಕರಿಸಿದ ವಿಷಯ ಪ್ರಸ್ತಾಪಿಸಿದ್ದಂತೆ ಮೈಕ್ ಮ್ಯೂಟ್ ಮಾಡಲಾಯಿತು ಎಂದು ಮಮತಾ ಆರೋಪಿಸಿದ್ದರು.
ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಧ್ಯಕ್ಷತೆಯಲ್ಲಿ ಎರಡು ದಿನಗಳ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಭಾಗಿಯಾಗಿದ್ದರು. ತಮಿಳುನಾಡು, ಕರ್ನಾಟಕ, ಕೇರಳ, ದೆಹಲಿ,‌ ತೆಲಂಗಾಣ, ಪಂಜಾಬ್, ಜಾರ್ಖಂಡ ಮುಖ್ಯಮಂತ್ರಿಗಳು ಮೊದಲೇ ಸಭೆಯನ್ನು ಬಹಿಷ್ಕರಿಸಿದ್ದರು.

ಪ್ರಮುಖ ಸುದ್ದಿ :-   30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement