ವಿಧಾನ ಪರಿಷತ್ತಿಗೆ ಉಮಾಶ್ರೀ, ಸೀತಾರಾಂ, ಸುಧಾಮ ದಾಸ್ ನಾಮನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ಸ್ಥಾನಕ್ಕೆ ಮೂವರ ನಾಮ ನಿರ್ದೇಶನಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಅನುಮೋದನೆ ನೀಡಿದ್ದಾರೆ.
ವಿಧಾನಪರಿಷತ್ ಸ್ಥಾನಕ್ಕೆ ಹಿರಿಯ ನಟಿ ಉಮಾಶ್ರೀ, ಕಾಂಗ್ರೆಸ್ ಮುಖಂಡ ಎಂ.ಆರ್ ಸೀತಾರಾಂ ಹಾಗೂ ಮಾಜಿ ಇಡಿ ಅಧಿಕಾರಿ ಸುಧಾಮ ದಾಸ್ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ಈ ಮೂವರು ನಾಮನಿರ್ದೇಶನಕ್ಕೆ ರಾಜ್ಯಪಾಲ ಥಾವರ ಚಂದ್ ಅವರು ಅನುಮೋದನೆ ನೀಡಿದ್ದಾರೆ.
ಈ ಮಧ್ಯೆ ಸುಧಾಮ ದಾಸ್ ಅವರ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ, ಆರ್.ಬಿ ತಿಮ್ಮಾಪುರ ಹಾಗೂ ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡಿಗೆ ಪತ್ರ ಬರೆದಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement