ಮಂಡ್ಯ: ತಂದೆಯಿಂದಲೇ ಮಗಳು ಪೋಲಿಸ್ ಠಾಣೆಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಅಪರೂಪದ ಘಟನೆಗೆ ಮಂಡ್ಯ ಸೆಂಟ್ರಲ್ ಠಾಣೆ ಸಾಕ್ಷಿಯಾಗಿದೆ.
ಇಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಬ್ ಇನ್ಸ್ಪೆಕ್ಟರ್ ಬಿ.ಎಸ್.ವೆಂಕಟೇಶ ಅವರು ಬೇರೆ ಠಾಣೆಗೆ ವರ್ಗಾವಣೆ ಆಗಿದ್ದಾರೆ, ಅವರು ವರ್ಗಾವಣೆಯಾದ ಜಾಗಕ್ಕೆ ಅವರ ಮಗಳಾದ ಬಿ.ವಿ.ವರ್ಷಾ ಅವರು ನೂತನ ಎಸ್ಐ ಆಗಿ ಅದೇ ಠಾಣೆಗೆ ಬಂದಿದ್ದಾರೆ.
ಮಗಳಿಗೆ ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆಯ ಅನುಭವ. ಇತ್ತ ಮಗಳಿಗೆ ಖುಷಿ ನೀಡಿದ ವಿದ್ಯಮಾನ. ಬಿ.ಎಸ್.ವೆಂಕಟೇಶ ಅವರು ತನ್ನ ಮಗಳಾದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಸಂದರ್ಭವಾಗಿತ್ತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು.
2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ ಮಂಡ್ಯದಲ್ಲೇ ಒಂದು ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಈಗ ಮಂಡ್ಯದಲ್ಲಿಯೇ ಸೆಂಟ್ರಲ್ ಠಾಣೆ ಎಸ್ ಐ ಆಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ವೆಂಕಟೇಶ ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ