ಬಿಲ್ಕಿಸ್ ಬಾನೊ ಪ್ರಕರಣ: : ಅಪರಾಧಿಗಳ ಕ್ಷಮೆ ವಿರುದ್ಧದ ರಿಟ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ

ನವದೆಹಲಿ: ಗುಜರಾತ್‌ ಕೋಮುಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ತನ್ನ ಕುಟುಂಬದ ಸದಸ್ಯರನ್ನು ಕೊಂದ 11 ಅಪರಾಧಿಗಳ ಶಿಕ್ಷೆ ತಗ್ಗಿಸಿ, ಬಿಡುಗಡೆಗೊಳಿಸಿರುವ ಗುಜರಾತ್‌ ಸರ್ಕಾರದ ನಿರ್ಧಾರ ಪ್ರಶ್ನಿಸಿ   ಬಿಲ್ಕಿಸ್‌ ಬಾನೋ ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿಗಳಾದ ಅಜಯ್ ರಾಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಆದರೆ ನ್ಯಾ. ಬೇಲಾ ತ್ರಿವೇದಿ ಅವರು ವಿಚಾರಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದರು. ನಮ್ಮಲ್ಲಿ ಒಬ್ಬರು ಸದಸ್ಯರಲ್ಲದ ಪೀಠದ ಮುಂದೆ ವಿಷಯವನ್ನು ಪಟ್ಟಿ ಮಾಡಿ ಎಂದು ನ್ಯಾಯಮೂರ್ತಿ ರಸ್ತೋಗಿ ನೇತೃತ್ವದ ಪೀಠವು ನ್ಯಾಯಮೂರ್ತಿ ತ್ರಿವೇದಿ ಅವರ ನಿರಾಕರಣೆಗೆ ಯಾವುದೇ ಕಾರಣವನ್ನು ನಿರ್ದಿಷ್ಟಪಡಿಸದೆ ಆದೇಶಿಸಿತು.
ಬಿಲ್ಕಿಸ್ ಬಾನೊ ಪರ ವಾದ ಮಂಡಿಸಿದ ವಕೀಲೆ ಶೋಭಾ ಗುಪ್ತಾ, ನ್ಯಾಯಾಲಯದ ಚಳಿಗಾಲದ ರಜೆ ಸಮೀಪಿಸುತ್ತಿರುವುದು ಅವರ ಏಕೈಕ ಸಂಕಟವಾಗಿದೆ ಎಂದರು.

ಹೊಸ ಪೀಠವನ್ನು ರಚಿಸಲಾಗುವುದು ಮತ್ತು ನಂತರ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ವಿಷಯವನ್ನು ಕೈಗೆತ್ತಿಕೊಂಡಾಗ, ಉಪಶಮನ (remission) ಆದೇಶಕ್ಕೆ ತಡೆ ಕೋರಿ ತನ್ನ ಅರ್ಜಿಯನ್ನು ಸಲ್ಲಿಸಲು ಬಯಸುವುದಾಗಿ ಗುಪ್ತಾ ಪೀಠಕ್ಕೆ ತಿಳಿಸಿದರು
ಗುಜರಾತ್‌ನಲ್ಲಿ 2002ರಲ್ಲಿ ನಡೆದ ಕೋಮುಗಲಭೆ ವೇಳೆ ದಹೋಡ್ ಜಿಲ್ಲೆಯ ಲಿಮ್‌ಖೆಡಾ ತಾಲ್ಲೂಕಿನಲ್ಲಿ ಬಾನೋ ಅವರ ಮೇಲೆ ಗಲಭೆಕೋರರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿತ್ತು. ಅಲ್ಲದೆ ಗುಂಪು ಹನ್ನೆರಡು ಜನರನ್ನು ಹತ್ಯೆಗೈದಿತ್ತು. ಇದರಲ್ಲಿ ಬಾನೋ ಅವರ ಮೂರು ವರ್ಷದ ಮಗಳು ಕೂಡ ಸೇರಿದ್ದಳು.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

ಈ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಬಾನೋ ಅವರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಪರಾಧಿ ರಾಧೇಶ್ಯಾಮ್ ಭಗವಾನ್‌ದಾಸ್‌ ಶಾ ಅಲಿಯಾಸ್‌ ಲಾಲಾ ವಕೀಲ್‌ ಎಂಬಾತ ತಮ್ಮನ್ನು ಅಪರಾಧ ನಡೆದ ಜುಲೈ 9, 1992ರ ಸಂದರ್ಭದಲ್ಲಿ ಗುಜರಾತ್‌ನಲ್ಲಿದ್ದ ನೀತಿಯಡಿ ಸನ್ನಡತೆಯ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡುವಂತೆ ಗುಜರಾತ್‌ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಪ್ರಕರಣವನ್ನು ಅಲಿಸಿದ್ದ ಸುಪ್ರೀಂ ಕೋರ್ಟ್‌ ಮೇ 13 ರಂದು ತನ್ನ ಆದೇಶದಲ್ಲಿ ಅಪರಾಧ ನಡೆದ ರಾಜ್ಯದಲ್ಲಿ ಆ ಸಮಯದಲ್ಲಿ ಅಸ್ತಿತ್ವದಲ್ಲಿದ್ದ ನೀತಿಯಂತೆ ಅಪರಾಧಿಗಳ ಬಿಡುಗಡೆ ಪರಿಗಣಿಸಬೇಕು ಎಂದು ಹೇಳಿತ್ತು. ಇದರ ಅನುಸಾರ ಗುಜರಾತ್‌ ಸರ್ಕಾರ ಬಾನೋ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿಯನ್ನು ಬಿಡುಗಡೆ ಮಾಡಿತು. ಇದನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೋ ಸುಪ್ರೀಂಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement