ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣ: ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸ್ತೇವೆ-ಆರಗ ಜ್ಞಾನೇಂದ್ರ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಸುಳಿವು ಸಿಕ್ಕಿದೆ. ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಗಲಾಟೆಗೂ ಇದಕ್ಕೂ ಸಂಬಂಧ ಇದೆ ಎನಿಸುವುದಿಲ್ಲ. ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ. ಏನು ಮಾಡಿದರೂ ಬಚಾವಾಗುತ್ತೇವೆ ಎಂದುಕೊಂಡವರನ್ನು ಸುಮ್ಮನೆ ಬಿಡುವುದಿಲ್ಲ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ. ನಗರದಲ್ಲಿ ಶಾಂತಿ ಕಾಪಾಡಬೇಕು. ಯಾರೂ ಭಾವುಕರಾಗುವುದು ಬೇಡ ಎಂದು ಹೇಳಿದರು.
ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಹರ್ಷನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಸರ್ಕಾರ ನಿಮ್ಮ ಜೊತೆ ಇರುತ್ತದೆ ಎಂದು ಧೈರ್ಯ‌ ತುಂಬಿದ್ದೇನೆ, ಕೊಲೆಗೆ ಕಾರಣ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಎಂದು ಅವರು ಹೇಳಿದರು.
ಆಕ್ರೋಶಕ್ಕೊಳಗಾದವರಿಂದ ಕಲ್ಲು ತೂರಾಟ ನಡೆದಿದೆ. ವಾಹನಗಳನ್ನು ಸುಟ್ಟು ಹಾಕಲಾಗಿದೆ. ಯಾರೂ ಈ ರೀತಿಯ ಕೃತ್ಯಕ್ಕೆ ಕೈಹಾಕಬಾರದು. ನಗರದಲ್ಲಿ ಶಾಲಾ ಕಾಲೇಜುಗಳಿಗೆ ಇಂದು, ರಜೆ ನೀಡಲಾಗಿದೆ. ಹರ್ಷನ ಕೊಲೆಗೆ ಯಾವ ಸಂಘಟನೆ ಕಾರಣ ಎಂಬ ಮಾಹಿತಿ ಇಲ್ಲ‌. ಹರ್ಷನ ಮೇಲೆ ಈ ಹಿಂದೆ ಹಲ್ಲೆ ನಡೆದಿತ್ತು ಎಂಬ ಮಾಹಿತಿ ಇದೆ. ಇನ್ನಷ್ಟೇ ಇದರ ಬಗ್ಗೆ ಸ್ಪಷ್ಟ ಮಾಹಿತಿ ಸಿಗಬೇಕಿದೆ. ಮುಂದೆ ಈ ರೀತಿಯ ಪ್ರಕರಣ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಘಟನೆ ಬಗ್ಗೆ ಎಲ್ಲರಿಗೂ ಆಕ್ರೋಶವಿದೆ. ಆರೋಪಿಗಳನ್ನು ಬಂಧಿಸಿ ಶಿಕ್ಷೆ‌ ಕೊಡಿಸುವ ಮೂಲಕ ಆಕ್ರೋಶ ತೀರಿಸಿಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿ ಸುವ್ಯವಸ್ಥೆಗೆ ಯಾರೂ ಧಕ್ಕೆಯುಂಟು ಮಾಡಬಾರದು ಎಂದು ಗೃಹಸಚಿವರುಮನವಿ ಮಾಡಿದರು.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement