ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

ಮುಂಬೈ : 60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ ದಂಪತಿಗೆ ಬಾಂಬೆ ಹೈಕೋರ್ಟ್‌ ವಿದೇಶ ಪ್ರವಾಸ ಮಾಡದಂತೆ ತಡೆ ನೀಡಿದೆ.
60 ಕೋಟಿ ರೂಪಾಯಿ ವಂಚನೆ ಆರೋಪದಡಿ ತಮ್ಮ ವಿರುದ್ಧ ಹೊರಡಿಸಲಾದ ಲುಕ್‌ಔಟ್‌ ನೋಟಿಸ್ ರದ್ದುಗೊಳಿಸುವಂತೆ ಕೋರಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾ ಬಾಂಬೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಬಾಂಬೆ ಹೈಕೋರ್ಟ್‌ ವಿದೇಶಕ್ಕೆ ಹೋಗುವುದಾದರೆ 60 ಕೋಟಿ ರೂಪಾಯಿ ಠೇವಣಿ ಇಟ್ಟು ಹೋಗಿ ಎಂದು ಹೇಳಿದೆ.

ಕಾರ್ಯಕ್ರಮ ನಿಮಿತ್ತ ಲಾಸ್ ಎಂಜಲೀಸ್ ಮತ್ತು ಇತರ ದೇಶಗಳಿಗೆ ತೆರಳಬೇಕಿತ್ತು. ಹೀಗಾಗಿ ಬಾಂಬೆ ಹೈಕೋರ್ಟ್, ಲಾಸ್ ಏಂಜಲೀಸ್ ಮತ್ತು ಇತರ ವಿದೇಶಗಳಿಗೆ ನೀವು ಪ್ರಯಾಣಿಸಲು ಬಯಸಿದರೆ ಮೊದಲು 60 ಕೋಟಿ ರೂಪಾಯಿ ಠೇವಣಿ ಇಡಿ ಎಂದು ದಂಪತಿಗೆ ಹೇಳಿದೆ.
2015 ರಿಂದ 2023ರ ನಡುವೆ, ದಂಪತಿ ತಮ್ಮ ವ್ಯವಹಾರ ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ, ಆದರೆ ತನಗೆ ಹಣ ನೀಡಿಲ್ಲ ಎಂದು ಉದ್ಯಮಿ ದೀಪಕ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಪಾಳದಲ್ಲಿ ದುರಂತ ; ಬಿಹಾರದಲ್ಲಿ ಆತಂಕ..! ಪ್ರವಾಹದಲ್ಲಿ ಬಂದ ಅಪರಿಚಿತ ಮೀನುಗಳು ಜೀವಕ್ಕೆ ಕಂಟಕ ? ಸರ್ಕಾರದ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement