ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ ಎಂದು ಅದು ತಿಳಿಸಿದೆ.
ಮಂಗಳವಾರ ರಾಜ್ಯದಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ. 1.15 ರಷ್ಟು ಇದೆ.

ಬೆಂಗಳೂರಿನಲ್ಲಿ 2,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಹಾಗೂ 57 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 4, ಚಿಕ್ಕಬಳ್ಳಾಪುರದಲ್ಲಿ 3, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಹಾಗೂ ಚಾಮರಾಜನಗರ ಮತ್ತು ವಿಜಯನಗರದಲ್ಲಿ ತಲಾ ಒಂದು ಕೊರೊನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಸೋಂಕಿತರಲ್ಲಿ 423 ಮಂದಿ ಮನೆ ಆರೈಕೆಗೆ ಒಳಗಾದರೆ, 41 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 44 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement