
ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಜುಲೈ 24ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗಲಿದ್ದು ಆರೇಂಜ್ ಅಲರ್ಟ್ ನೀಡಲಾಗಿದೆ. ಹಾಗೂ ಜುಲೈ 25ರಿಂದ 27ರ ವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು ಜುಲೈ 24ರಿಂದ 27ರ ವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ ಜಿಲ್ಲೆಗೆ ಜುಲೈ 25ರಿಂದ 27ರ ವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ 24ರಿಂದ ಮೂರ್ನಾಲ್ಕು ದಿನ ಜೋರಾದ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ