ತೈಲೆ ಬೆಲೆ ಗ್ರಾಹಕರಿಗೆ ಹೊರೆ ಎಂದು ಒಪ್ಪಿದ ನಿರ್ಮಲಾ

ನವ ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ತಗ್ಗಿಸಬೇಕು ಎಂದು ಗ್ರಾಹಕರು ಒತ್ತಾಯಿಸಿರುವುದರಲ್ಲಿ ಅರ್ಥವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಒಪ್ಪಿಕೊಂಡರು.
ಇಂಧನದ ಬೆಲೆ ಕಡಿಮೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಸುಂಕ ಮತ್ತು ತೆರಿಗೆ ಕಡಿಮೆ ಮಾಡಬೇಕು ಎಂದು ಅವರು ಹೇಳಿದರು.
ಮುಕ್ತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಬೆಲೆಯಲ್ಲಿ ಶೇಕಡ 60ರಷ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಂಕ, ತೆರಿಗೆ ರೂಪದಲ್ಲಿ ಸಂದಾಯವಾಗುತ್ತದೆ. ಡೀಸೆಲ್‌ ಬೆಲೆಯ ಶೇ 56ರಷ್ಟು ಈ ರೀತಿ ಸಂದಾಯವಾಗುತ್ತದೆ.
ಗ್ರಾಹಕರ ಪಾಲಿಗೆ ಈ ಬೆಲೆ ಒಂದು ಹೊರೆ ಎಂದಷ್ಟೆ ಹೇಳಿದರು.
ಇದನ್ನು ಜಿಎಸ್‌ಟಿ ವ್ಯವಸ್ಥೆಯಡಿ ತರುವ ವಿಚಾರದಲ್ಲಿ ಜಿಎಸ್‌ಟಿ ಮಂಡಳಿಯೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement