ಬೆಂಗಳೂರಲ್ಲಿ ಆಘಾತಕಾರಿ ಘಟನೆ ; ಬೆಳಗಿನ ವಾಕಿಂಗ್‌ ಗೆ ಹೊರಟಿದ್ದ ಮಹಿಳೆ ತಬ್ಬಿಹಿಡಿದು ಕಿರುಕುಳ ನೀಡಿದ ದುಷ್ಕರ್ಮಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 2 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ವೀಡಿಯೊ ವೈರಲ್‌ ಆಗಿದೆ. ವೀಡಿಯೊದಲ್ಲಿ ಮಹಿಳೆ ಮನೆಯೊಂದರ ಹೊರಗೆ ನಿಂತಿರುವುದನ್ನು ತೋರಿಸುತ್ತದೆ, ಆಗ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ ಬಳಿಗೆ ಬಂದಿದ್ದಾನೆ. ನಂತರ ಅವನು ಮಹಿಳೆಯನ್ನು ಹಿಂಬಾಲಿಸುವುದನ್ನು ಮತ್ತು ಬೀದಿಯಲ್ಲಿ ಮಹಿಳೆಯನ್ನು ಬಲವಂತದಿಂದ ತಬ್ಬಿಕೊಳ್ಳುವುದು ಕಂಡುಬರುತ್ತದೆ.
ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ದುಷ್ಕರ್ಮಿ ತನ್ನ ಕೈಯಿಂದ ಆಕೆಯ ಬಾಯಿ ಮುಚ್ಚಿದ್ದಾನೆ . ತನ್ನನ್ನು ತಾನು ರಕ್ಷಿಸಿಕೊಳ್ಳುವ ಹತಾಶ ಪ್ರಯತ್ನದಲ್ಲಿ, ಮಹಿಳೆ ಜೋರಾಗಿ ಕಿರುಚಿದ್ದಾರೆ. ಜೊತೆಗೆ ಅಕ್ಕಪಕ್ಕದ ನಾಯಿಗಳು ಬಿಗಳಲು ಆರಂಭಿಸಿದವು. ಹೀಗಾಗಿ ಹೆದರಿ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಪೊಲೀಸರ ಪ್ರಕಾರ, ಮಹಿಳೆ ರಾಜಸ್ಥಾನ ಮೂಲದವರಾಗಿದ್ದು, ಪ್ರತಿದಿನ ಬೆಳಗ್ಗೆ ವಾಕಿಂಗ್‌ಗೆ ಹೋಗುತ್ತಿದ್ದರು. ಮಹಿಳೆ ತನ್ನ ವಾಕಿಂಗ್‌ ಸ್ನೇಹಿತರಿಗೆ ಕಾಯುತ್ತಿದ್ದಾಗ ಕಿರುಕುಳಕ್ಕೊಳಗಾದರು. ದಾಳಿಕೋರ ಬಿಳಿ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದ ಎಂದು ವಿವರಿಸಲಾಗಿದೆ. ಮಹಿಳೆ ಕೂಗಿಕೊಂಡಾಗ ಆತ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 2ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 76, 78, ಮತ್ತು 79 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಆತನ ಪತ್ತೆಗಾಗಿ ಶೋಧವನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಹಿಳೆಯ ಪತಿಯೇ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಹೆಚ್ಚುವರಿಯಾಗಿ, ಹೆಚ್ಚಿನ ಪೊಲೀಸ್ ಗಸ್ತು ಅಗತ್ಯವಿರುವ ಪ್ರದೇಶಗಳಲ್ಲಿ, ಈಗಾಗಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement