ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡನ ಮಗ ಸೇರಿ ನಾಲ್ವರ ವಿರುದ್ಧ ಆರೋಪ

ಭೋಪಾಲ್: ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಾಲ್ವರು ಆರೋಪಿಗಳಲ್ಲಿ ಮಧ್ಯಪ್ರದೇಶ ಬಿಜೆಪಿ ನಾಯಕನ ಮಗ ಸೇರಿದ್ದಾನೆ.
ಸಂತ್ರಸ್ತ ಹೆಣ್ಣುಮಕ್ಕಳ ಸಂಬಂಧಿಕರು ಮತ್ತು ಸ್ಥಳೀಯರು ಕ್ರಮಕ್ಕಾಗಿ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರದೇಶವು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಅವರ ತವರು ಕ್ಷೇತ್ರವಾಗಿದೆ, ಅವರು ದತಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಭಾರತೀಯ ಜನತಾ ಪಕ್ಷದ ದತಿಯಾ ಜಿಲ್ಲಾ ಘಟಕದ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿ , ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಪೊಲೀಸ್ ಹೇಳಿಕೆಯಲ್ಲಿ ಪಕ್ಷದ ಸ್ಥಳೀಯ ಕಾರ್ಯಕರ್ತನ ಮಗನನ್ನು ಅಪರಾಧದಲ್ಲಿ ಭಾಗಿ ಎಂದು ಹೆಸರಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಂತ್ರಸ್ತರಲ್ಲಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳು.

ಪ್ರಮುಖ ಸುದ್ದಿ :-   ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ಸಂತ್ರಸ್ತರು ಮತ್ತು ಆರೋಪಿಗಳು ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದಾತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ತನ್ನನ್ನು ಮತ್ತು ತನ್ನ ಅಕ್ಕನನ್ನು ನಾಲ್ಕು ಜನರು ಅಪಹರಿಸಿದ್ದಾರೆ. ಆರೋಪಿಗಳು ತಮ್ಮನ್ನು ಮನೆಗೆ ಕರೆದೊಯ್ದು, ಅಲ್ಲಿ ಅವರು ತನ್ನ ಅಕ್ಕನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಎಂದು ಪ್ರದೀಪ್ ಶರ್ಮಾ ತಿಳಿಸಿದ್ದಾರೆ.

ಯುವತಿಯು ಕಿರಿಯ ಸಹೋದರಿ ದೂರು ದಾಖಲಿಸಿದ್ದಾರೆ. ಘಟನೆಯ ನಂತರ ಸಂತ್ರಸ್ತೆ ಮತ್ತು ಆಕೆಯ ತಂಗಿ ಮನೆಗೆ ಮರಳಿದರು, ಅಲ್ಲಿ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದರು. ನಂತರ ಮಹಿಳೆಯನ್ನು ನೆರೆಯ ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಶರ್ಮಾ ಹೇಳಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ ಆರೋಪಿ ದೂರುದಾರರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪರಾರಿಯಾಗಿರುವ ಆರೋಪಿಗಳಿಗೆ ₹ 10 ಸಾವಿರ ಬಹುಮಾನ ಘೋಷಿಸಲಾಗಿದೆ ಎಂದರು.
ಘಟನೆ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಂದ್ರ ಬುಧೋಲಿಯಾ ಹೇಳಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಬಿಜೆಪಿ ಪದಾಧಿಕಾರಿಯ ಮಗನ ಹೆಸರನ್ನು ತೆಗೆದುಕೊಂಡರೆ, ಪಕ್ಷವು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಬುಧೋಲಿಯಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement