ಬೆಳಗಾವಿ : ನಾವಗೆಯಲ್ಲಿ 4 ಮನೆಗಳ ಮೇಲೆ ಕಲ್ಲು ತೂರಾಟ, ದಾಂಧಲೆ

ಬೆಳಗಾವಿ : ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ನಾಲ್ಕು ಮನೆಗಳ ಮೇಲೆ ಮನ ಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ.
ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಗುಂಪಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಎಲ್ಲರೂ ಮುಸುಕುಧಾರಿಗಳಾಗಿ ಗ್ರಾಮ ಪ್ರವೇಶಿಸಿ ಅಟ್ಟಹಾಸ ಮೆರೆದಿದ್ದಾರೆ. ಮನೆಗಳ ಕಿಟಕಿ, ಗೋಡೆ ಹಾಗೂ ಟೈಲ್ಸ್ ಗಳನ್ನು ಸಹ ಧ್ವಂಸಗೊಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ ಅವರು ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತದೆ. ಘಟನೆಗೆ ಕಾರಣರಾದ ಎಲ್ಲರನ್ನು ಶೀಘ್ರವೇ ಬಂಧಿಸುವುದಾಗಿ ಹೇಳಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement